ತಾಂತ್ರಿಕ ಇಲಾಖೆಯ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರಕಾರದಿಂದ ಭರ್ಜರಿ ಗಿಫ್ಟ್

0
292

ಬೆಂಗಳೂರ: ರಾಜ್ಯದಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಅತಿಥಿ ಉಪನ್ಯಾಸಕರ ಮಾಸಿಕ ಸಂಭಾವನೆಯನ್ನು 10 ವರ್ಷಗಳ ಬಳಿಕ ಪರಿಷ್ಕರಿಸಲಾಗಿದೆ. ಸರ್ಕಾರಿ ಮತ್ತು ಅನುದಾನಿತ ಇಂಜಿನಿಯರಿಂಗ್ ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಗಳಲ್ಲಿ ಕಾರ್ಯನಿರ್ವಹಿಸುವ ಅರೆಕಾಲಿಕ ಉಪನ್ಯಾಸಕರ ಸಂಭಾವನೆ ಪರಿಷ್ಕರಿಸಲಾಗಿದೆ. ಪಾಲಿಟೆಕ್ನಿಕ್ ಅರೆಕಾಲಿಕ ಉಪನ್ಯಾಸಕರಿಗೆ 7500 ಇಂದ 12500 ರೂ., ಅನುದಾನಿತ ಇಂಜಿನಿಯರಿಂಗ್ ಕಾಲೇಜುಗಳ ಅರೆಕಾಲಿಕ ಉಪನ್ಯಾಸಕರಿಗೆ 10 ಸಾವಿರದಿಂದ 15 ಸಾವಿರ ರೂಪಾಯಿ ಕೊಡಲು ಮಂಜೂರಾತಿ ನೀಡಲಾಗಿದೆ.!

LEAVE A REPLY

Please enter your comment!
Please enter your name here