ದಕ್ಷಿಣ ಕನ್ನಡ ಮಂಗಳೂರಿಗೆ ಸಿಎಂ ಭೇಟಿ.

0
107

ಬೆಂಗಳೂರು, ಬೆಂಕಿ ಮುಚ್ಚಿದ ಕೆಂಡದಂತಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿನೀಡಿ ವಿವಿಧ ಧಾರ್ಮಿಕ ಮುಖಂಡರ ಜೊತೆ ಶಾಂತಿ ಸಂಧಾನ ಸಭೆ ನಡೆಸಲಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿರುವ ಈ ಸಭೆಗೆ ಹಿಂದುಪರ ಸಂಘಟನೆಗಳು, ಆರ್‍ಎಸ್‍ಎಸ್ ಮುಖಂಡರು, ಮುಸ್ಲಿಂ ಮುಖಂಡರು ಸೇರಿದಂತೆ ಧಾರ್ಮಿಕ ಮುಖಂಡರು ಪಾಲ್ಗೊಳ್ಳಬೇಕೆಂದು ಖುದ್ದು ಮುಖ್ಯಮಂತ್ರಿಯವರೇ ಮನವಿ ಮಾಡಿದ್ದಾರೆ. ಸಂಘಟನೆಗಳು ಧಾರ್ಮಿಕ ಮುಖಂಡರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ವಲಯ ಐಜಿಪಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ನಗರ ಪೊಲೀಸ್ ಆಯುಕ್ತರು ಸೇರಿದಂತೆ ಮತ್ತಿತರರು ಭಾಗವಹಿಸುವರು.

ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಇಬ್ಬರು ಯುವಕರು ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದು. ಜಿಲ್ಲೆಯಾದ್ಯಂತ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕಾನೂನು ಸುವ್ಯವಸ್ಥೆ ಇನ್ನಷ್ಟು ಹದಗೆಡಬಾರದೆಂಬ ಹಿನ್ನೆಲೆಯಲ್ಲಿ ಎಲ್ಲಾ ಮುಖಂಡರ ಜೊತೆ ಬಿಎಸ್‍ವೈ ಸಭೆ ನಡೆಸಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳುವಂತೆ ಜನತೆಯಲ್ಲಿ ಮನವಿ ಮಾಡಲಿದ್ದಾರೆ.

LEAVE A REPLY

Please enter your comment!
Please enter your name here