ದೇಶಾಧ್ಯಂತ ಸಡಗರದ ಕ್ರಿಸ್ಮಸ್ ಹಬ್ಬ ಮಧ್ಯರಾತ್ರಿಯಿಂದಲೇ ಚರ್ಚ್ಗಳಲ್ಲಿ ಆರಾಧನೆಗಳು

0
177
  1. ನವದೆಹಲಿ: ಏಸುಕ್ರಿಸ್ತರ ಜನ್ಮದಿನ ಕ್ರಿಸ್ ಮಸ್ ಹಬ್ಬವನ್ನು ಕ್ರೈಸ್ತ ಬಾಂಧವರು ದೇಶಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸುತ್ತಿದ್ದಾರೆ.ಬೆಂಗಳೂರು, ಪಣಜಿ, ದೆಹಲಿ ಸೇರಿದಂತೆ ದೇಶದ ವಿವಿಧ ಕಡೆಗಳಲ್ಲಿ ಚರ್ಚ್ ಗಳಲ್ಲಿ ಕ್ರೈಸ್ತ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ಗೋವಾದ ರಾಜಧಾನಿ ಪಣಜಿಯಲ್ಲಿನ ಇಮ್ಯಾಕ್ಯುಲೇಟ್ ಕಾನ್ಸೆಪ್ಷನ್ ಚರ್ಚ್ ವೈವಿಧ್ಯಮಯ, ವರ್ಣಮಯ ವಿದ್ಯುತ್ ದೀಪಾಲಂಕಾರ ಹಾಗೂ ಚಿತ್ತಾಕರ್ಷಕ ನಕ್ಷತ್ರಗಳಿಂದ ಕಂಗೊಳಿಸುತಿತ್ತು. ಗೋದಲಿಯಲ್ಲಿ ಬಾಲ ಯೇಸುಮೂರ್ತಿಯನ್ನು ಇಟ್ಟು ದೇವರ ಸ್ತುತಿ, ಜೋಗಳುದ ಮೂಲಕ ಭಕ್ತಾಧಿಗಳು ಆರಾಧಿಸಿದರು. ಮೇಣದ ಬತ್ತಿಗಳನ್ನು ಬೆಳಗಿ ಯೇಸು ಜನ್ಮ ದಿನವನ್ನು ಸ್ವಾಗತಿಸಿದರು.

ಬೆಂಗಳೂರಿನ ಸೇಂಟ್ ಫ್ರಾನ್ಸಿಸ್ ಜೇವಿಯರ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಮಧ್ಯರಾತ್ರಿ ಅಪಾರ ಪ್ರಮಾಣದಲ್ಲಿ ನೆರೆದಿದ್ದ ಭಕ್ತಾಧಿಗಳು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

LEAVE A REPLY

Please enter your comment!
Please enter your name here