ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಿಶ್ವಮಾನವ ದಿನಾಚರಣೆ ಕಡ್ಡಾಯ;ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ರಆಯಚೂರು

0
219
ರಾಯಚೂರು,ಡಿ.28. ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನವನ್ನು ಡಿ.29ರಂದು ವಿಶ್ವಮಾನವ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಜಿಲ್ಲೆಯ ಶಾಲಾ-ಕಾಲೇಜುಗಳಲ್ಲಿ ವಿಶ್ವಮಾನವ ಸಂದೇಶ ಕುರಿತಂತೆ ವಿಚಾರಗೋಷ್ಠಿ ಹಮ್ಮಿಕೊಳ್ಳುವ ಮೂಲಕ ಜಯಂತಿ ಆಚರಿಸಲು ಕ್ರಮಕೈಗೊಳ್ಳುವಂತೆ ಬೆಂಗಳೂರಿನ ಸಾರ್ವಜನಿಕ ಶಿಕ್ಷಣ ಇಲಾಖೆ (ಪ್ರಾಥಮಿಕ ಶಿಕ್ಷಣ) ನಿರ್ದೇಶಕರು ಸೂಚಿಸಿದ್ದಾರೆ.
ಈ ದಿಸೆಯಲ್ಲಿ ಡಿ.29ರಂದು ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಕುವೆಂಪು ಅವರ ವಿಶ್ವ ಮಾನವ ಸಂದೇಶ ಕುರಿತ ವಿಚಾರಗೋಷ್ಠಿ ಹಮ್ಮಿಕೊಳ್ಳುವ ಮೂಲಕ ವಿಶ್ವಮಾನವ ದಿನಾಚರಣೆಯನ್ನು ಆಚರಿಸುವಂತೆ ಶಾಲೆಯ ಮುಖ್ಯಗುರುಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here