ನೇತಾಜಿ ಸ್ಕೂಲ್‌ನಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಅಂತರ್ ಶಾಲಾ ರಸಪ್ರಶ್ನೆ ಸ್ಪರ್ಧೆ, ವಿದ್ಯಾರ್ಥಿಗಳು ಏಕಾಗ್ರತೆಯಿಂದ ಅಭ್ಯಾಸದಲ್ಲಿ ತೊಡಗಬೇಕು – ಕೆ.ವಿಜಯಲಕ್ಷ್ಮಿ

0
262

ಮಾನ್ವಿ :- ಹತ್ತನೆ ತರಗತಿ ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ವದ ಘಟ್ಟ. ಆದ್ದರಿಂದ ವಿದ್ಯಾರ್ಥಿಗಳು ಏಕಾಗ್ರತೆಯಿಂದ ಅಭ್ಯಾಸದಲ್ಲಿ ತೊಡಗಿ ಉತ್ತಮ ಫಲಿತಾಂಶವನ್ನು ಪಡೆಯಬೇಕು. ನೇತಾಜಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕೆ.ವಿಜಯಲಕ್ಷ್ಮಿ ಅವರು ಹೇಳಿದರು.

ಅವರು ಶನಿವಾರ ಪಟ್ಟಣದ ನೇತಾಜಿ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಹತ್ತನೆ ತರಗತಿಯ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಅಂತರ್ ಶಾಲಾ ರಸಪ್ರಶ್ನೆ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು.
ಪ್ರತಿ ವರ್ಷವು ನಮ್ಮ ನೇತಾಜಿ ಶಿಕ್ಷಣ ಸಂಸ್ಥೆಯಲ್ಲಿ ಹತ್ತನೆ ತರಗತಿಗಯ ವಿದ್ಯಾರ್ಥಿಗಳಿಗೆ ತಾಲೂಕ ಮಟ್ಟದ ಪಠ್ಯಕ್ರಮ ಆದರಿತ ರಸಪ್ರಶ್ನೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗುತ್ತದೆ. ಇದರ ಉದ್ದೇಶ ತಾಲೂಕಿನ ಎಲ್ಲಾ ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಪೈಪೋಟಿ ಮನೋಭಾವ ಬೆಳಸಿಕೊಳ್ಳಲಿ ಎನ್ನುವುದೇ ಆಗಿದೆ. ಎಂದು ಹೇಳಿದ ಅವರು ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವ ಬೆಳಸಿಕೊಳ್ಳುವುದರ ಜೊತೆಗೆ ಉತ್ತಮ ಭವಿಷತ್ತು ರೂಪಿಸಿಕೊಳ್ಳಲು ಪ್ರಯತ್ನಿಸಬೇಕು. ಆ ಮೂಲಕ ತಂದೆ-ತಾಯಿಗೆ ಮತ್ತು ವಿದ್ಯೆ ಕಲಿಸಿದ ಶಿಕ್ಷಕರಿಗೆ ಗೌರವ ತರಬೇಕು ಎಂದು ಹೇಳಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಕೆ.ಈ. ನರಸಿಂಹ ವಹಿಸಿದ್ದರು.

ಈ ರಸಪ್ರಶ್ನೆ ಸ್ಪರ್ಧೆಯಲ್ಲಿ ತಾಲೂಕಿನ ಬಾಲಕರ ಸರಕಾರಿ ಪ್ರೌಢಶಾಲೆ ಮಾನ್ವಿ, ಚನ್ನಬಸವೇಶ್ವರ ಪ್ರೌಢಶಾಲೆ ಬಾಗಲವಾಡ, ಸರಕಾರಿ ಪ್ರೌಢಶಾಲೆ ಮಾಡಗಿರಿ, ಸರಕಾರಿ ಪ್ರೌಢ ಶಾಲೆ ಗೋರ್ಕಲ್, ಗಾಂಧಿ ಪ್ರೌಢಶಾಲೆ, ಕಲ್ಮಠ ಪ್ರೌಢಶಾಲೆ, ಸರಕಾರಿ ಪ್ರೌಢಶಾಲೆ ಕೋನಾಪುರ್‌ಪೇಟೆ, ವೆಂಕಟೇಶ್ವರ ಪ್ರೌಢಶಾಲೆ, ಕಲ್ಮಠ ಪ್ರೌಢಶಾಲೆ ಹಿರೆಕೊಟ್ನೆಕಲ್, ಮೊರಾರ್ಜಿ ಪ್ರೌಢಶಾಲೆ ಮಾನ್ವಿ, ಕಾಕತೀಯ ಪ್ರೌಢಶಾಲೆ, ಬಿ.ವಿ.ಆರ್. ಪ್ರೌಢಶಾಲೆ ಮತ್ತು ನೇತಾಜಿ ಪ್ರೌಢಶಾಲೆ ಸೇರಿದಂತೆ ಕನ್ನಡ ಮತ್ತು ಇಂಗ್ಲೀಷ್ ಮಾಧ್ಯಮದ 18 ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಈ ಸ್ಪರ್ಧೆಯಲ್ಲಿ ವಿಜೇತ ತಂಡಗಳಿಗೆ ಸ್ಥಳದಲ್ಲೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂಬಂಧಿಸಿದ ಶಾಲೆಗಳ ಶಿಕ್ಷಕರು ಉಪಸ್ಥಿರಿದ್ದರು.

LEAVE A REPLY

Please enter your comment!
Please enter your name here