ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಣೆ. ಸಿದ್ಧರಾಮೇಶ್ವರಂರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ.

0
177

ರಾಯಚೂರು: ಸಮಾಜ ಸುಧಾರಕರಾದ ಶಿವಯೋಗಿ ಸಿದ್ಧರಾಮೇಶ್ವರರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಗ್ರಾಮೀಣ ಶಾಸಕ ಬಸವನಗೌಡ ದದ್ದಲ್ ತಿಳಿಸಿದರು.

ಶನಿವಾರದಂದು ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಶಿವಯೋಗಿ ಸಿದ್ಧರಾಮೇಶ್ವರ ಅವರು ತಮ್ಮ ವಚನಗಳ ಮೂಲಕ ಸಮಾಜದ ಅಂಕುಡೊಂಕು ತಿದ್ದಲು ಪ್ರಯತ್ನಿಸಿದ್ದರು. ಸಮಸ್ಯೆಗಳಿಗೆ ಹೆದರದೇ ಮುನ್ನುಗ್ಗಿ ಜನರ ಮನಸ್ಸಿನಲ್ಲಿ ಅರಿವು ಮೂಡಿಸುವ ಕೆÀಲಸ ಮಾಡಿದ್ದರು. ಬಸವಣ್ಣನವರ ಅನುಭವ ಮಂಟಪದಲ್ಲಿ ಸಾಮಾಜಿಕ ಸಮಾನತೆಯ ತತ್ವ ಸಂದೇಶಗಳನ್ನು ಸಾರಿದ ಶ್ರೇಷ್ಠ ವ್ಯಕ್ತಿಯಾಗಿದ್ದಾರೆ. ಅವರ ವಚನಗಳು ಇಂದಿಗೂ ಪ್ರಸ್ತುತ ಎಂದು ತಿಳಿಸಿದರು.

ಪಾಲಕರು ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ನೀಡಬೇಕು.ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ವಿವಿಧ ಕ್ಷೇತ್ರಗಳಲ್ಲಿ ಅಪಾರ ಸಾಧನೆ ಮಾಡಿದಾಗ ಮಾತ್ರ ಒಂದು ಸಮಾಜ ಬಲಿಷ್ಠವಾಗಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬ ವ್ಯಕ್ತಿಗೆ ಸೌಲಭ್ಯಗಳು ಸಿಗಬೇಕು ಈ ನಿಟ್ಟಿನಲ್ಲಿ ಎಲ್ಲರೂ ಜಾಗೃತರಾಗಬೇಕು.ಇಂತಹ ಮಹಾನ್ ವ್ಯಕ್ತಿಗಳ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಈ ಜಯಂತಿ ಆಚರಣೆಗೆ ಒಂದು ಅರ್ಥ ಬರುತ್ತದೆ ಎಂದು ಹೇಳಿದರು.
ನಂತರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಗರ ಶಾಸಕರ ಡಾ.ಎಸ್. ಶಿವರಾಜ್ ಪಾಟೀಲ್ ಮಾತನಾಡಿ, ಇಂದು ಶ್ರೀ ಶಿವಯೋಗಿ ಸಿದ್ಧರಾಮೇಶ್ವ ಜಯಂತಿಯನ್ನು ಸಡಗರ ಸಂಭ್ರಮದಿಂದ ಆಚರಿಸುತ್ತಿರುವುದು ಸಂತಸದಾಯಕವಾಗಿದೆ ಹಾಗೂ ನಗರದಲ್ಲಿ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಮೂರ್ತಿಯನ್ನು ಸುಂದರವಾಗಿ ನಿರ್ಮಿಸಿರುವುದು ಹೆಮ್ಮೆಯ ಸಂಗತಿಯಾಗಿದೆ. ಭೋವಿ ಸಮಾಜದವರು ಶ್ರಮ ಜೀವಿಗಳಾಗಿದ್ದು, ಸಮಾಜ ಅಭಿವೃದ್ಧಿಯಾಗಲು ಶಿಕ್ಷಣ ಮುಖ್ಯವಾದ ಆಯುಧವಾಗಿದೆ ಹಾಗಾಗಿ ಪ್ರತಿಯೊಬ್ಬರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಉನ್ನತ ಶಿಕ್ಷಣ ಪಡೆಯಬೇಕು ಎಂದು ಸಲಹೆ ನೀಡಿದರು. ಭೋವಿ ಸಮಾಜಕ್ಕೆ ಸರಕಾರದಿಂದ ಒಂದು ಎಕರೆ ಜಮೀನು ಮಂಜೂರಾಗಿದ್ದು ಅಲ್ಲಿ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಭವನ ನಿರ್ಮಾಣ ಮಾಡಿ ಮುಂದಿನ ದಿನಗಳಲ್ಲಿ ಜಯಂತಿ ಆಚರಿಸಬೇಕು.
ಯಾವುದೇ ಸಮಸ್ಯೆಗಳಿದ್ದರೂ ನನಗೆ ಹೇಳಿ ಅವುಗಳನ್ನು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಾಮಾಣಿಕವಾದ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಸಮಾಜ ಸೇವೆ ಮಾಡಿದ ಭೋವಿ ಸಮುದಾಯದ ವಿವಿಧ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಶಿಕ್ಷಕರಾದ ಆಂಜನೇಯ ತುರಕಣದೋಣಿ ಅವರು ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ದುರುಗೇಶ, ಭೋವಿ ಸಮಾಜದ ಜಿಲ್ಲಾಧ್ಯಕ್ಷರಾದ ಲಕ್ಷö್ಮಣ್,ಸಮಾಜದ ತಾಲೂಕು ಘಟಕದ ಅಧ್ಯಕ್ಷರಾದ ಆಂಜನೇಯ್ಯ,ನಗರಸಭೆ ಸದಸ್ಯರಾದ ವಿ. ನಾಗರಾಜ್, ರಮೇಶ್,ಮಹೇಂದ್ರರೆಡ್ಡಿ,ಎA.ನಾಗರಾಜ್ ಮತ್ತು ಮಹಿಳಾ ಘಟಕದ ಅಧ್ಯಕ್ಷರಾದ ಶಶಿಕಲಾ ಭೀಮರಾಯ ಹಾಗೂ ಸಮಾಜದ ವಿವಿಧ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಮಂಗಳ ಬಿ ನಾಯಕ್ ಅವರು ಸ್ವಾಗತಿಸಿದರು. ದಂಡಪ್ಪ ಬಿರಾದರ್ ಅವರು ನಿರೂಪಿಸಿ,ವಂದಿಸಿದರು.

LEAVE A REPLY

Please enter your comment!
Please enter your name here