ಗಣರಾಜ್ಯೋತ್ಸವ ದಿನದಂದು ಅಂಬೇಡ್ಕರ್ ಭಾವಚಿತ್ರ ಇಡದೆ ಅವಮಾನ: ಕ್ರಮಕ್ಕೆ ಆಗ್ರಹ

0
198

ರಾಯಚೂರು:ಜ.28- ಗಣರಾಜ್ಯೋತ್ಸವ ದಿನದಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರ ಇಡದೇ ಕೇವಲ ಗಾಂಧೀಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗಣರಾಜ್ಯೋತ್ಸವವನ್ನು ಆಚರಣೆ ಮಾಡಲಾಗಿದೆ ಅಂತಹವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಅಂಬೇಡ್ಕರ್ ಸೇನೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಜ.26 ರಂದು ನಡೆದ 71ನೇ ಗಣರಾಜ್ಯೋತ್ಸ ದಿನಾಚರಣೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರ ಕಡ್ಡಾಯವಾಗಿ ಇಟ್ಟು ಪೂಜೆ ಸಲ್ಲಿಸಿ ಆಚರಣೆ ಮಾಡುವಂತೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ,ಆದರೂ ಸಹ ಸರ್ಕಾರದ ಆದೇಶವನ್ನು ಮೀರಿ ನಗರದ ಮಂತ್ರಾಲಯ ರಸ್ತೆಯಲ್ಲಿರುವ ನವೋದಯ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಕೇವಲ ಗಾಂಧೀಜಿಯವರ ಪೊಟೋ ಇಟ್ಟು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ ಅಂಬೇಡ್ಕರರ ಭಾವಚಿತ್ರವನ್ನು ಇಡದೆ ಅವಮಾನ ಮಾಡಿ,ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿದರು.

ಸರ್ಕಾರದ ಕಡ್ಡಾಯ ನಿಯಮಗಳನ್ನು ಗಾಳಿಗೆ ತೂರಿದ ನವೋದಯ ಶಿಕ್ಷಣ ಸಂಸ್ಥೆಯ ಮೇಲೆ ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಒಂದು ವೇಳೆ ಅವರ ವಿರುದ್ಧ ಕ್ರಮ ಕೈಗೊಳ್ಳಲು ಹಿಂದೇಟು ಹಾಕಿ,ನಿರ್ಲಕ್ಷö್ಯ ವಹಿಸಿದಲ್ಲಿ ಜಿಲ್ಲೆಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಅಂಬೇಡ್ಕರ್ ಸೇನೆಯ ಜಿಲ್ಲಾಧ್ಯಕ್ಷ ವಿಶ್ವನಾಥ ಪಟ್ಟಿ,ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಬಂದೇನವಾಜ್,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ,ಕುಮಾರ ಸ್ವಾಮಿ,ರಾಜೇಶ,ಭೀಮೇಶ ಕುರ್ಡಿ,ಶಬ್ಬೀರ್,ಶಿವಕುಮಾರ್,ಚಂದ್ರಶೇಖರ್ ಸೇರಿದಂತೆ ಇನ್ನಿತರರು ಇದ್ದರು.

LEAVE A REPLY

Please enter your comment!
Please enter your name here