ಲಾಕ್​ಡೌನ್​ ಮುಂದುವರೆಸುವುದು ಅಗತ್ಯ; ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ

0
161

 ಏಪ್ರಿಲ್ 14 ರ ನಂತರವೂ ಲಾಕ್​ಡೌನ್​ ಮುಂದುವರೆಸಬೇಕೇ ಬೇಡವೇ ಎಂಬ ವಿಚಾರವಾಗಿ ಪ್ರಧಾನಿ ಮೋದಿ ಅವರು ಇಂದು ಸರ್ವಪಕ್ಷಗಳ ಸಭೆ ನಡೆಸಿದರು. ಸದ್ಯದ ಪರಿಸ್ಥಿತಿಯಲ್ಲಿ ಲಾಕ್​ಡೌನ್​ ಮುಂದುವರೆಸುವುದು ಅತ್ಯಗತ್ಯ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ನವದೆಹಲಿ: ದೇಶದಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಮಾರ್ಚ್ 24ರಿಂದ ಏಪ್ರಿಲ್ 14ರವರೆಗೆ ಒಟ್ಟು 21 ದಿನಗಳ ಕಾಲ ದೇಶವನ್ನು ಲಾಕ್​ಡೌನ್ ಮಾಡಲಾಗಿದೆ. ಆದರೆ, ಲಾಕ್​ಡೌನ್​ ಮಾಡಿದ್ದರೂ ಕೊರೋನಾ ಸೋಂಕು ಹತೋಟಿಗೆ ​ ಬಾರದ ಹಿನ್ನೆಲೆಯಲ್ಲಿ ಲಾಕ್​ಡೌನ್​ಅನ್ನು ಏಪ್ರಿಲ್​ 14ರ ನಂತರವೂ ಮುಂದುವರೆಸುವ ಅಗತ್ಯವಿದೆ ಎಂದು ಪ್ರಧಾನಿ ಮೋದಿ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here