ನಾಳಿನ ಕರ್ನಾಟಕ ಬಂದ್ ಗೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ( WPI ) ಸಂಪೂರ್ಣ ಬೇಂಬಲ

0
253

ಮಾನವಿ, ಸೆ.27- ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರುದ್ಧ ವಿವಿಧ ಸಂಘಟನೆಗಳು ನಾಳೆ ಹಮ್ಮಿಕೊಂಡಿರುವ ರಾಜ್ಯಾದ್ಯಂತ ಬಂದ್‍ಗೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಸಂಪೂರ್ಣ ಬೆಂಬಲ ವ್ಯಕ್ತ ಪಡಿಸಿದೇ.

ರಾಜ್ಯ ಸರ್ಕಾರ ಜಾರಿ ಮಾಡಿರುವ ಭೂ ಸುಧಾರಣೆ ಕಾಯ್ದೆ ವಿರೋಧಿಸಿ ರಾಜ್ಯದ ರೈತ ಸಂಘಗಳು ಹಾಗೂ ಅನೇಕ ಪ್ರಗತಿಪರ ಸಂಘಟನೇಗಳು  ಹಮ್ಮಿಕೊಂಡಿರುವ ಬಂದ್‍ಗೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದು ವೇಲ್ಫೇರ್ ಪಾರ್ಟಿಯ ಜಿಲ್ಲಾ ಅಧ್ಯಕ್ಷರಾದ ಮೌಲಾನ ಫರೀದ್ ಉಮರಿ ಹೇಳಿದರು.

ರೈತರಿಗೆ ಮಾರಕವಾಗುವ ಭೂ ಸುಧಾರಣೆ ಕಾಯ್ದೆಗೆ ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿಗೆ ನಮ್ಮ ವಿರೋಧವಿದೆ ಎಂದು ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚೆಗೆ ಸರಕಾರದ ಧೊರಣೇ ಮತ್ತು ಈ  ಕಾಯ್ದೆಯ ವಿರುದ್ಧ ರೈತರ ಪರವಾಗಿ ನಡೆದಿರುವ ರಾಜ್ಯಮಟ್ಟದ ಪ್ರತಿಭಟನೆಗಳಲ್ಲಿ ಭಾಗವಹಿಸಿ ನಮ್ಮ ಪಕ್ಷದ ರಾಜ್ಯಧ್ಯಕ್ಷರು ಮತ್ತು ಕಾರ್ಯಕರ್ತರು ಪ್ರತಿಭಟನೆ ಮಾಡಿ ತಿದ್ದುಪಡಿ ವಾಪಸ್ಸು ಪಡೆಯುವಂತೆ  ಆಗ್ರಹಿಸಿದ್ದಾರೇ.

ಈ ನಿಟ್ಟಿನಲ್ಲಿ ನಾಳೆ ನಡೆಯುವ ಬಂದ್ ಮತ್ತು ಪ್ರತಿಭಟನೆಗೆ ರಾಯಚೂರು ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಪಕ್ಷದ ವತಿಯಿಂದ ಸಂಪೂರ್ಣ ಬೆಂಬಲವಿದೆ.

LEAVE A REPLY

Please enter your comment!
Please enter your name here