ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಕಡಿಮೆಯಾಗುತ್ತಿದ್ದು, ಭಾನುವಾರ 4,439 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ

ರಾಜ್ಯದಲ್ಲಿ 8 ಲಕ್ಷ ದಾಟಿದ ಕೊರೋನಾ, ಇಂದು ಬೆಂಗಳೂರಿನಲ್ಲಿ 2468 ಸೇರಿ 4439 ಮಂದಿಗೆ ಪಾಸಿಟಿವ್

0
179

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಕಡಿಮೆಯಾಗುತ್ತಿದ್ದು, ಭಾನುವಾರ 4,439 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 8 ಲಕ್ಷದ ಗಡಿ ದಾಟಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 2468 ಮಂದಿ ಸೇರಿದಂತೆ ರಾಜ್ಯದಲ್ಲಿ 4439 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 8,02817ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 32 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 10,905ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2,468 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 3,25,773ಕ್ಕೆಕ್ಕೆ ಏರಿಕೆಯಾಗಿದೆ. ನಗರದಲ್ಲಿ ಇಂದು 20 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

ಇಂದು 10,106 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 7,10,843ಕ್ಕೆ ಏರಿಕೆಯಾಗಿದೆ. 81,050 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ 939 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಸಿಲಿಕಾನ್‌ ಸಿಟಿಯಲ್ಲಿ ಇದುವರೆಗೂ 2,70,366 ಜನ ಗುಣಮುಖರಾಗಿದ್ದರೆ, ಸಕ್ರಿಯ ಪ್ರಕರಣಗಳ ಸಂಖ್ಯೆ 51,672ಕ್ಕೆ ಇಳಿದಿದೆ. 3,784 ಜನ ಕೊರೊನಾ ಕಾರಣದಿಂದ ಉದ್ಯಾನ ನಗರಿಯಲ್ಲಿ ಮೃತಪಟ್ಟಿದ್ದಾರೆ.

LEAVE A REPLY

Please enter your comment!
Please enter your name here