ಹತ್ರಾಸ್ ಅತ್ಯಾಚಾರ ತನಿಖೆಯ ಕುರಿತು ನಿಗಾ ಇರಿಸುವಂತೆ ಸುಪ್ರೀಂಕೋರ್ಟ್ ಸಿಬಿಐಗೆ ನಿರ್ದೇಶನ.

ಉತ್ತರಪ್ರದೇಶದ ಹತ್ರಾಸ್ ನಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನಡೆಸುತ್ತಿರುವ ತನಿಖೆಯ ಕುರಿತು ನಿಗಾ ಇರಿಸುವಂತೆ ಸುಪ್ರೀಂಕೋರ್ಟ್ ಇಂದು ಅಲಹಾಬಾದ್ ಹೈಕೋರ್ಟ್ ಸೂಚನೆ ನೀಡಿದೆ.

0
92

ಹತ್ರಾಸ್ ಅತ್ಯಾಚಾರ ತನಿಖೆಯ ಕುರಿತು ನಿಗಾ ಇರಿಸುವಂತೆ ಸುಪ್ರೀಂಕೋರ್ಟ್ ಸಿಬಿಐಗೆ ನಿರ್ದೇಶನ.

ನವದೆಹಲಿ, ಅ.27– ಉತ್ತರಪ್ರದೇಶದ ಹತ್ರಾಸ್ ನಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನಡೆಸುತ್ತಿರುವ ತನಿಖೆಯ ಕುರಿತು ನಿಗಾ ಇರಿಸುವಂತೆ ಸುಪ್ರೀಂಕೋರ್ಟ್ ಇಂದು ಅಲಹಾಬಾದ್ ಹೈಕೋರ್ಟ್ ಸೂಚನೆ ನೀಡಿದೆ.

ಹೈಕೋರ್ಟ್ ಮಾರ್ಗದರ್ಶನದಡಿ ತನಿಖೆಯನ್ನೂ ನಡೆಸುವಂತೆ ಸುಪ್ರೀಂಕೋರ್ಟ್ ಸಿಬಿಐಗೆ ನಿರ್ದೇಶನ ನೀಡಿದ್ದು ಕಾಲಕಾಲಕ್ಕೆ ತನಿಖಾ ವರದಿಯನ್ನು ಅಲಹಾಬಾದ್ ಹೈಕೋರ್ಟ್ ಗೆ ಸಲ್ಲಿಸುವಂತೆಯೂ ಸೂಚಿಸಿದೆ.

ಸತ್ಯಂ ದುಬೆ ಸೇರಿದಂತೆ ಅನೇಕರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್, ಅಲಹಾಬಾದ್ ಹೈಕೋರ್ಟ್ ಮಾರ್ಗದರ್ಶನದಲ್ಲಿ ಸಿಬಿಐ ತನಿಖೆ ನಡೆಯಲಿದೆ ಎಂದು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೋಬ್ಡೆ ಅವರಿಂದ ತ್ರಿಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.

ಸಂತ್ರಸ್ತೆಯ ಮೇಲೆ ನಡೆದ ಅಮಾನವೀಯ ಕ್ರೌರ್ಯದ ಬಗ್ಗೆ ನ್ಯಾಯಾಲಯ ಈಗಾಗಲೇ ಸ್ವಯಂಪ್ರೇರಿತ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿದೆ. ಅಲಹಾಬಾದ್ ಹೈಕೋರ್ಟ್ ಮಾರ್ಗದರ್ಶನದಲ್ಲಿ ಸಿಬಿಐ ತನಿಖೆ ನಡೆಸಲಿದೆ ಎಂದು ನ್ಯಾಯಪೀಠ ತಿಳಿಸಿದೆ.

ನ್ಯಾಯವಾದಿ ಇಂದಿರಾ ಜೈಸಿಂಗ್, ಸೇರಿದಂತೆ ಅನೇಕ ವಕೀಲರು ಪ್ರಗತಿಪರ ಚಿಂತಕರು ಸೇರಿದಂತೆ ಹಲವರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿ ಉತ್ತರಪ್ರದೇಶದಿಂದ ದೆಹಲಿ ನ್ಯಾಯಾಲಯಕ್ಕೆ ಸಿಬಿಐ ತನಿಖೆಯ ಉಸ್ತುವಾರಿ ವಹಿಸಬೇಕು ಎಂದು ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದರು.

ಉತ್ತರ ಪ್ರದೇಶ ನ್ಯಾಯಾಲಯದ ಮಾರ್ಗದರ್ಶನದಲ್ಲಿ ಸಿಬಿಐ ತನಿಖೆ ನಡೆದರೆ ನ್ಯಾಯ ಸಿಗುವುದಿಲ್ಲ ಎಂದು ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದರು.

ನ್ಯಾಯಾಲಯದ ಮಾರ್ಗದರ್ಶನದಲ್ಲಿ ತನಿಖೆ ನಡೆಯುವಾಗ ಯಾರು ಅನುಮಾನ ಪಡುವ ಅಗತ್ಯವಿಲ್ಲ ಈಗಾಗಲೇ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ ಇದನ್ನು ನೋಡಿದರೆ ನ್ಯಾಯಾಲಯ ಯಾವ ದಿಕ್ಕಿನಲ್ಲಿದೆ ವಿಚಾರಣೆ ಬಗ್ಗೆ ಆತಂಕ ಬೇಡ ಎಂದು ಅರ್ಜಿದಾರರಿಗೆ ಸುಪ್ರೀಂಕೋರ್ಟ್ ತಿಳಿಸಿದೆ.

ಹತ್ರಾಸ್ ನಲ್ಲಿ ನಡೆದ ದಲಿತ ಯುವತಿಯ ಮಾರಣಾಂತಿಕ ಹಲ್ಲೆ ಮತ್ತು ಅತ್ಯಾಚಾರ ನಡೆದಿದ್ದು ಇದು ಇಡೀ ದೇಶವನ್ನು ಬೆಚ್ಚಿ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು

LEAVE A REPLY

Please enter your comment!
Please enter your name here