ಫ್ರಾಂಸ್ ನ ನೀಸ್ ನಗರದಲ್ಲಿ ಭಯೊತ್ಪಾದಕರ ಅಟ್ಟಹಾಸ

0
116

ನೀಸ್ ( ಪ್ರಾನ್ಸ್) ,ಅ.2- ಫ್ರಾನ್ಸ್ ನ ನೀಸ್ ನಗರದ ನಾಟ್ರೇ ಡ್ಯಾಮ್ ಬೆಸಿಲಿಕಾ ಚರ್ಚ್ ನಲ್ಲಿ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದು ಮೂರು ಮಂದಿ ಮೃತಪಟ್ಟು ಅನೇಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಫ್ರಾನ್ಸ್ ನಲ್ಲಿ ನಡೆದ ಭಯೋತ್ಪಾದಕರ ದುಷ್ಕೃತ್ಯವನ್ನು ಭಾರತ, ಯುನೈಟೆಡ್ಅರಬ್ ಎಮಿರೇಟ್ಸ್,ಈಜಿಪ್ಟ್, ಸೌದಿ ಅರೇಬಿಯಾ ಸೇರಿದಂತೆ ಜಗತ್ತಿನ ಅನೇಕ ದೇಶಗಳು ತೀವ್ರವಾಗಿ ಖಂಡಿಸಿವೆ.

ನೀಸ್ ನಗರದ ಚರ್ಚ್ ನಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ಚಾಕುವಿನಿಂದ ಮಾರಣಾಂತಿಕ ಹಲ್ಲೆ ಮಾಡಿದ ಪರಿಣಾಮ ಸ್ಥಳದಲ್ಲಿಯೇ ಮೂರು ಮಂದಿ ಮೃತಪಟ್ಟಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಫ್ರಾನ್ಸ್ ನಲ್ಲಿ ಇತ್ತೀಚಿನ ವರ್ಷಗಳಲ್ಲಿ ಮೇಲಿಂದ ಮೇಲೆ ಭಯೋತ್ಪಾದಕರ ದಾಳಿ ನಿರಂತರವಾಗಿ ನಡೆಯುತ್ತಿದ್ದು ಅದರಲ್ಲಿ ಇದೀಗ ನೀಸ್ ನಗರದಲ್ಲಿ ನಡೆದ ಭಯೋತ್ಪಾದನಾ ದಾಳಿಯು ಒಂದಾಗಿದ್ದು ಫ್ರಾನ್ಸ್ ಬೆಚ್ಚಿಬಿದ್ದಿದೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಫ್ರಾನ್ಸ್ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದು ಜೊತೆ ಭಾರತ ನಿಲ್ಲಲಿದೆ ಎಂದು ಹೇಳಿದ್ದಾರೆ.

ಈಜಿಪ್ಟ್ ನ ಅತಿ ದೊಡ್ಡ ಧಾರ್ಮಿಕ ಕೇಂದ್ರ ಅಲ್ -ಅಜರ್ ಘಟನೆಯನ್ನು ತೀವ್ರವಾಗಿ ಖಂಡಿಸಿದೆ ಇಂತಹದರ ವಿರುದ್ಧ ಜಾಗತಿಕವಾಗಿ ಹೋರಾಟ ಮಾಡುವ ಅಗತ್ಯವಿದೆ ಎಂದು ಹೇಳಿದೆ.

ಮೂಲಭೂತವಾದಿಗಳು ಮತ್ತು ಭಯೋತ್ಪಾದಕರು ಸಮಾಜಕ್ಕೆ ಅತ್ಯಂತ ಅಪಾಯಕಾರಿ ಇಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಸೌದಿ ಅರೇಬಿಯಾ ತಿಳಿಸಿದೆ‌

LEAVE A REPLY

Please enter your comment!
Please enter your name here