ಮುಕೇಶ್ ಅಂಬಾನಿ ಜಗತ್ತಿನ ಅತೀ ಶ್ರೀಮಂತರ ಪಟ್ಟಿಯಲ್ಲಿ 5ನೇ ಸ್ಥಾನದಿಂದ 9ನೇ ಸ್ಥಾನಕ್ಕೆ

ಉದ್ಯಮಿ ಮುಕೇಶ್ ಅಂಬಾನಿ ಅವರು ಜಗತ್ತಿನ ಅತೀ ಶ್ರೀಮಂತರ ಪಟ್ಟಿಯಲ್ಲಿ 5ನೇ ಸ್ಥಾನದಿಂದ 9ನೇ ಸ್ಥಾನಕ್ಕೆ ಕುಸಿದಿದ್ದಾರೆ.

0
70

ನವದೆಹಲಿ: ಉದ್ಯಮಿ ಮುಕೇಶ್ ಅಂಬಾನಿ ಅವರು ಜಗತ್ತಿನ ಅತೀ ಶ್ರೀಮಂತರ ಪಟ್ಟಿಯಲ್ಲಿ 5ನೇ ಸ್ಥಾನದಿಂದ 9ನೇ ಸ್ಥಾನಕ್ಕೆ ಕುಸಿದಿದ್ದಾರೆ.

ಏಷ್ಯಾದ ಅತೀ ಶ್ರೀಮಂತ ಎಂಬ ಖ್ಯಾತಿಗೆ ಭಾಜನರಾಗಿದ್ದ ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಗೆ 2ನೇ ತ್ರೈಮಾಸಿಕದಲ್ಲಿ ಲಾಭದಲ್ಲಿ ಭಾರಿ ಇಳಿಕೆಯಾಗಿದೆ.

ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳ ಬೆಲೆ ನಿನ್ನೆಗೆ ಶೇಖಡ 8ಕ್ಕೂ ಹೆಚ್ಚು ಇಳಿಕೆಯಾಗಿದೆ. ಮೇ 12ರಂ ನಂತರ ಇದೇ ಮೊದಲ ಬಾರಿಗೆ ಸಂಸ್ಥೆಯ ಷೇರು ಬೆಲೆಯಲ್ಲಿ ತೀವ್ರ ಕುಸಿತ ಕಂಡಿದೆ.

ಕೊರೋನಾ ಪ್ರಭಾವದ ಹಿನ್ನೆಲೆಯಲ್ಲಿ ಮುಕೇಶ್ ಅಂಬಾನಿ ಅವರ ಸಂಪತ್ತಿನಲ್ಲಿ 5 ಬಿಲಿಯನ್ ಡಾಲರ್ ನಷ್ಟು(37 ಸಾವಿರ ಕೋಟಿ ರೂ.) ನಷ್ಟ ಉಂಟಾಗಿದ್ದು ಹೀಗಾಗಿ  ಶ್ರೀಮಂತರ ಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಕುಸಿದಿದ್ದಾರೆ.

 

LEAVE A REPLY

Please enter your comment!
Please enter your name here