ಮಾಜಿ ಸಚಿವ ಕೆಜೆ ಜಾರ್ಜ್ ಗೆ ಬಿಗ್ ರಿಲೀಫ್

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ಇಂದು ಸಿಬಿಐ ನೀಡಿದ್ದ ಬಿ-ರಿಪೋರ್ಟ್ ಎತ್ತಿ ಹಿಡಿದಿದೆ ಮಾಜಿ ಸಚಿವ ಕೆಜೆ ಜಾರ್ಜ್ ಗೆ ಬಿಗ್ ರಿಲೀಫ್ ನೀಡಿದೆ.

0
18

ಬೆಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ಇಂದು ಸಿಬಿಐ ನೀಡಿದ್ದ ಬಿ-ರಿಪೋರ್ಟ್ ಎತ್ತಿ ಹಿಡಿದಿದೆ ಮಾಜಿ ಸಚಿವ ಕೆಜೆ ಜಾರ್ಜ್ ಗೆ ಬಿಗ್ ರಿಲೀಫ್ ನೀಡಿದೆ.

ಮಾಜಿ ಸಚಿವ ಜಾರ್ಜ್ ಹಾಗೂ ಇತರೆ ಇಬ್ಬರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪವಿತ್ತು

ಆದರೆ ಸಮನ್ಸ್ ಪ್ರಶ್ನಿಸಿ ಮೂವರು ಸಹ ಹೈಕೋರ್ಟ್ ಮೊರೆ ಹೋಗಿದ್ದರು. ಇಂದು ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಸಿಬಿಐ ನೀಡಿದ್ದ ವರದಿಯನ್ನು ಮಾನ್ಯ ಮಾಡಿದೆ. ಈ ಮೂಲಕ ಮೃತ ಗಣಪತಿಯವರ ಕುಟುಂಬಕ್ಕೆ ಭಾರೀ ಹಿನ್ನೆಡೆಯಾಗಿದೆ.

2016ರ ಜು.17ರಂದು ನಡೆದಿದ್ದ ಡಿವೈಎಸ್ಪಿ ಎಂಕೆ ಗಣಪತಿ ಆತ್ಮಹತ್ಯೆಗೆ ಘಟನೆಗೆ ಹಲವರು ಕಾರಣವಾಗಿದ್ದಾರೆಂದು ಮಾಡಿದ್ದ ಆರೋಪ “ಹುರುಳಿಲ್ಲದ್ದು” ಎಂದು ಸಿಬಿಐ ಬಿ-ರಿಪೋರ್ಟ್ ಸಲ್ಲಿಸಿತ್ತು. ಆದರೆ ಈ ವರದಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿ ವಿಚಾರಣೆಗೆ ಹಾಜರಾಗಬೇಕೆಂದು ಸಮನ್ಸ್ ಜಾರಿ ಮಾಡಿತ್ತು.

LEAVE A REPLY

Please enter your comment!
Please enter your name here