ದೀಪಾವಳಿಗೆ ಪಟಾಕಿ ಬ್ಯಾನ್.

ಈ ಬಾರಿ ದೀಪಾವಳಿಯಂದು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಯಾವುದೇ ಭಾಗದಲ್ಲೂ ಪಟಾಕಿಗಳನ್ನು ಸಿಡಿಸದಂತೆ ಶೀಘ್ರದಲ್ಲೇ ಆದೇಶ ಹೊರಡಿಸಲಿದ್ದೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

0
161

ಬೆಂಗಳೂರು,ನ.6- ರಾಜ್ಯದಲ್ಲಿ ಕೊರೊನಾ ಮತ್ತೆ ಹೆಚ್ಚಾಗಬಹುದೆಂದು ತಜ್ಞರು ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಬೆಳಕಿನ ಹಬ್ಬ ದೀಪಾವಳಿಯಲ್ಲಿ ಪಟಾಕಿ ಸಿಡಿಸುವುದನ್ನು ರಾಜ್ಯ ಸರ್ಕಾರ ನಿಷೇ ಸುವ ಮಹತ್ವದ ತೀರ್ಮಾನ ಕೈಗೊಂಡಿದೆ. ಈ ಬಾರಿ ದೀಪಾವಳಿಯಂದು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಯಾವುದೇ ಭಾಗದಲ್ಲೂ ಪಟಾಕಿಗಳನ್ನು ಸಿಡಿಸದಂತೆ ಶೀಘ್ರದಲ್ಲೇ ಆದೇಶ ಹೊರಡಿಸಲಿದ್ದೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಅಕಾರಿಗಳ ಜೊತೆ ಮಾತುಕತೆ ನಡೆಸಲಾಗಿದೆ. ಕೊರೊನಾ ಸಂದರ್ಭದಲ್ಲಿ ಪಟಾಕಿ ಹೊಡೆಯುವುದು ಸಾರ್ವಜನಿಕ ಹಿತದೃಷ್ಟಿಯಿಂದ ಸರಿಯಲ್ಲ ಎಂದು ತಜ್ಞರು ಸಲಹೆ ಮಾಡಿದ್ದಾರೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಶೀಘ್ರದಲ್ಲೇ ಆದೇಶ ಹೊರಡಿಸುತ್ತೇನೆ ಎಂದರು.

ಜಿಲ್ಲಾಡಳಿತದ ಮೂಲಕ ಸರ್ಕಾರಿ ಸುತ್ತೋಲೆಯನ್ನು ರವಾನೆ ಮಾಡಲಾಗುವುದು. ಯಾವುದೇ ರೀತಿಯ ಪಟಾಕಿಯನ್ನು ಮಾರಾಟ ಮಾಡುವುದಾಗಲಿ ಅಥವಾ ಕೊಳ್ಳುವುದಾಗಲಿ ಮಾಡುವಂತಿಲ್ಲ ಎಂದು ಸ್ಪಷ್ಟಪಡಿಸಿದರು.

LEAVE A REPLY

Please enter your comment!
Please enter your name here