ಸಣ್ಣ ವ್ಯಾಪಾರಗಳಿಗೆ ಅಲ್ಪಸಂಖ್ಯಾತ ಮಹಿಳೆಯರಿಗೆ ಮೈಕ್ರೋ ಸಾಲ | 23 ಕೋಟಿ ರೂ. ನಿಗದಿ

ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಬಡ ಮಹಿಳೆಯರಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಮೈಕ್ರೋ ಸಾಲ ಯೋಜನೆಯಡಿ ಸಾಲ ಸೌಲಭ್ಯ ನೀಡಲಿದ್ದು, ಇದಕ್ಕಾಗಿ 23 ಕೋಟಿ ರೂ. ನಿಗದಿ ಮಾಡಿದೆ ಎಂದು ನಿಗಮದ ಅಧ್ಯಕ್ಷ ಮುಖ್ತಾರ್ ಹುಸೇನ್ ಪಠಾಣ್ ತಿಳಿಸಿದ್ದಾರೆ.

0
231

ಬೆಂಗಳೂರು : ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಬಡ ಮಹಿಳೆಯರಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಮೈಕ್ರೋ ಸಾಲ ಯೋಜನೆಯಡಿ ಸಾಲ ಸೌಲಭ್ಯ ನೀಡಲಿದ್ದು, ಇದಕ್ಕಾಗಿ 23 ಕೋಟಿ ರೂ. ನಿಗದಿ ಮಾಡಿದೆ ಎಂದು ನಿಗಮದ ಅಧ್ಯಕ್ಷ ಮುಖ್ತಾರ್ ಹುಸೇನ್ ಪಠಾಣ್ ತಿಳಿಸಿದ್ದಾರೆ.

ಯೋಜನೆಯಡಿ 23 ಸಾವಿರ ಮಹಿಳೆಯರಿಗೆ ಸಾಲ ನೀಡಲು ಉದ್ದೇಶಿಸಲಾಗಿದೆ. ಬಿಪಿಎಲ್ ಕಾರ್ಡ್ ಹೊಂದಿರುವ 25ರಿಂದ 50 ವರ್ಷದ ಮಹಿಳೆಯರಿಗೆ ತಳ್ಳುವ ಗಾಡಿಯಲ್ಲಿ ವ್ಯಾಪಾರ, ಬೀದಿ ಬದಿ ವ್ಯಾಪಾರ, ಜಾತ್ರೆಗಳಲ್ಲಿ ವ್ಯಾಪಾರ, ಕಿರಾಣಿ ಅಂಗಡಿ, ಅರಿಶಿಣ ಕುಂಕುಮ, ಅಗರಬತ್ತಿ, ಕರ್ಪೂರ, ಫೂಟ್ ಪಾತ್ ಗಳ ಮೇಲೆ ಕಾಫಿ, ಎಳನೀರು, ಹೂವಿನ ವ್ಯಾಪಾರ, ಹಣ್ಣು ತರಕಾರಿ ಮಾರಾಟದಂತಹ ವ್ಯಾಪಾರಗಳನ್ನು ನಡೆಸಲು 10 ಸಾವಿರ ರೂ. ಅಲ್ಪಾವಧಿ ಸಾಲ ನೀಡಲಾಗುವುದು.

ಇದರಲ್ಲಿ 8 ಸಾವಿರ ರೂ. ಸಾಲ ಮತ್ತು 2 ಸಾವಿರ ರೂ. ಸಬ್ಸಿಡಿ ಇರುತ್ತದೆ. ಅಲ್ಪಸಂಖ್ಯಾತ ನಿಗಮದಿಂದ ನೀಡಲಾಗುವ ಎಲ್ಲಾ ಸಾಲ ಸೌಲಭ್ಯಗಳಿಗೆ ಇನ್ನು ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಫಲಾನುಭವಿಗಳ ಖಾತೆಗೆ ಹಣ ನೇರವಾಗಿ ಜಮಾ ಆಗುತ್ತದೆ.

ಸರಕಾರದ ಈ ಯೋಜನೆಗಳಿಗೆ ನೇರವಾಗಿ ಆನ್ ಲೈನ್ ಅರ್ಜಿ ಸಲ್ಲಿಸಿಯೇ ನೆರವು ಬಳಸಿಕೊಳ್ಳಬೇಕು. ಏಜೆಂಟರು ಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here