ಅಮೇರಿಕ ಅಧ್ಯಕ್ಷೀಯ ಚುನಾವಣೆಯ ಅಧಿಕೃತ ಫಲಿತಾಂಶ ಘೋಷಣೆ

ಇಡೀ ವಿಶ್ವದಾದ್ಯಂತ ತೀವ್ರ ಕುತೂಹಲ ಕೆರಳಿಸಿದ ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಪೂರ್ಣ ಫಲಿತಾಂಶ ಪ್ರಕಟ

0
84

ಅಮೇರಿಕ ಅಧ್ಯಕ್ಷೀಯ ಚುನಾವಣೆಯ ಅಧಿಕೃತ ಫಲಿತಾಂಶ ಘೋಷಣ.

ವಾಷಿಂಗ್ಟನ್, ನ.14- ಇಡೀ ವಿಶ್ವದಾದ್ಯಂತ ತೀವ್ರ ಕುತೂಹಲ ಕೆರಳಿಸಿದ ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಪೂರ್ಣ ಫಲಿತಾಂಶ ಪ್ರಕಟವಾಗಿದ್ದು , 538 ಕಾಲೇಜ್‍ಎಲೆಕ್ಟ್ರೋಲ್ (ಪ್ರಾತಿನಿಧಿಕ) ಮತ ಎಣಿಕೆಯನ್ನು ಅಧಿಕೃತವಾಗಿ ಮುಕ್ತಾಯಗೊಳಿಸಲಾಗಿದೆ.

ಅಮೆರಿಕ ಅಧ್ಯಕ್ಷರಾಗಿ ಚುನಾಯಿತರಾಗಿರುವ ಮಾಜಿ ಉಪಾಧ್ಯಕ್ಷ ಮತ್ತು ಡೆಮಾಕ್ರೆಟಿಕ್ ಪಕ್ಷದ ನಾಯಕ ಜೋಬಿಡೆನ್ ನಿರೀಕ್ಷೆಯಂತೆ 306 ಮತಗಳನ್ನು ಗಳಿಸಿ ಅಮೆರಿಕ ಅಧ್ಯಕ್ಷ ಮತ್ತು ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ 232 ಮತಗಳನ್ನು ಗಳಿಸಿ ಸೋಲೊಪ್ಪಿಕೊಂಡಿದ್ದಾರೆ. ಶ್ವೇತಭವನದ ಅಧ್ಯಕ್ಷ ಕುರ್ಚಿಗೇರಲು 270 ಮ್ಯಾಜಿಕ್ ನಂಬರ್ ಅಗತ್ಯವಿತ್ತು. 306 ಮತಗಳನ್ನು ಗಳಿಸಿರುವ ಬಿಡೆನ್ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಈ ಚುನಾವಣೆಯಲ್ಲಿ 23.9 ಕೋಟಿ ಅಮೆರಿಕನ್ನರು ದಾಖಲೆ ಪ್ರಮಾಣದಲ್ಲಿ ಮತ ಚಲಾಯಿಸಿದ್ದರಿಂದ ಫಲಿತಾಂಶ ವಿಳಂಬವಾಗಿತ್ತು. ನಿನ್ನೆ ತಡರಾತ್ರಿ ಮತ ಎಣಿಕೆಯನ್ನು ಪೂರ್ಣಗೊಳಿಸಲಾಗಿದ್ದು, ಅಧಿಕೃತ ಫಲಿತಾಂಶ ಘೋಷಿಸಲಾಗಿದೆ.

 

LEAVE A REPLY

Please enter your comment!
Please enter your name here