ನಾಲ್ಕನೇ ಬಾರಿ ಬಿಹಾರದ ಮುಖ್ಯ ಮಂತ್ರಿಯಾಗಿ ನಾಳೆ ಪ್ರಮಾಣ ವಚನ ಮಾಡಲಿರುವ ನಿತೀಶ್ ಕುಮಾರ್

ಬಿಹಾರದಲ್ಲಿ ಎನ್ ಡಿ ಎ ಮೈತ್ರಿಕೂಟದ ಶಾಸಕಾಂಗ ಪಕ್ಷದ ನಾಯಕನಾಗಿ ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಯ್ಕೆಯಾಗಿದ್ದು ಸತತ ನಾಲ್ಕನೇ ಬಾರಿಗೆ ಅಧಿಕಾರ ಚುಕ್ಕಾಣಿ ಹಿಡಿಯಲು ಸಜ್ಜಾಗಿದ್ದಾರೆ.

0
119

ನಾಲ್ಕನೇ ಬಾರಿ ಬಿಹಾರದ ಮುಖ್ಯ ಮಂತ್ರಿಯಾಗಿ ನಾಳೆ ಪ್ರಮಾಣ ವಚನ ಮಾಡಲಿರುವ ನಿತೀಶ್ ಕುಮಾರ್. 

ಪಾಟ್ನಾ,ನ.15- ಬಿಹಾರದಲ್ಲಿ ಎನ್ ಡಿ ಎ ಮೈತ್ರಿಕೂಟದ ಶಾಸಕಾಂಗ ಪಕ್ಷದ ನಾಯಕನಾಗಿ ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಯ್ಕೆಯಾಗಿದ್ದು ಸತತ ನಾಲ್ಕನೇ ಬಾರಿಗೆ ಅಧಿಕಾರ ಚುಕ್ಕಾಣಿ ಹಿಡಿಯಲು ಸಜ್ಜಾಗಿದ್ದಾರೆ.

ನಾಳೆ ಬೆಳಿಗ್ಗೆ ೧೧.೩೦ಕ್ಕೆ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದ್ದು ಮುಖ್ಯಮಂತ್ರಿಯಾಗಿ ನಾಲ್ಕನೇ ಅವಧಿಯಲ್ಲಿ ೭ ನೇ ಬಾರಿಗೆ ನಿತೀಶ್ ಕುಮಾರ್ ಅಧಿಕಾರ ಸ್ವೀಕರಿಸುವ ಸಾದ್ಯತೆಗಳಿವೆ. ಉಪ ಮುಖ್ಯಮಂತ್ರಿ ಯಾಗಿ ಬಿಜೆಪಿಯ ಸುಶೀಲ್ ಕುಮಾರ್ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ನಿರಾಶಾದಾಯಕ ಪ್ರದರ್ಶನ ನೀಡಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸ್ಥಾನ ಒಪ್ಪಿಕೊಳ್ಳಲು ಹಿಂದೇಟು ಹಾಕಿದ್ದರು.ಹೀಗಾಗಿ ಇಂದು ನಡೆದ ಎನ್ ಡಿಎ ಪಕ್ಷಗಳ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿತೀಶ್ ಕುಮಾರ್ ಮನವೊಲಿಸಿ ಅಧಿಕಾರ ಚುಕ್ಕಾಣಿ ನೀಡಲು ನಿರ್ಧರಿಸಿದ್ದಾರೆ.

ಕೇಂದ್ರ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಇಂದು ಮದ್ಯಾಹ್ನ ನಡೆದ ಎನ್ ಡಿಎ ನಾಯಕರ ಮಹತ್ವದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನಾಗಿ ನಿತೀಶ್ ಕುಮಾರ್ ಅವರನ್ನು ಜೆಡಿಯು, ಬಿಜೆಪಿ, ಎಚ್ ಎ ಎಂ, ವಿಐಪಿ ಪಕ್ಷದ ಶಾಸಕರು ಆಯ್ಕೆ ಮಾಡಿದ್ದಾರೆ. ಈ ಬಗ್ಗೆ ಅಧಿಕೃತ ಪ್ರಕಟಣೆ ಬಾಕಿ ಉಳಿದಿದೆ.

ಈ ಮೂಲಕ ಎನ್ ಡಿಎ ನಾಯಕರು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮನವೊಲಿಕೆ ಯಶಸ್ವಿಯಾಗಿದ್ದಾರೆ.
ಹೀಗಾಗಿ ಬಿಹಾರದ ಮುಖ್ಯಮಂತ್ರಿಯಾಗಿ ನಾಲ್ಕನೇ ಅವಧಿಗೆ ಏಳನೇ ಬಾರಿ ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಚುಕ್ಕಾಣಿ ಹಿಡಿಯಲಿದ್ದಾರೆ .ಯಾವಾಗ ಪ್ರಮಾಣವಚನ ಸ್ವೀಕಾರ ಮಾಡಬೇಕು ಎನ್ನುವುದನ್ನು ಇಂದೇ ನಿರ್ಧಾರ ಮಾಡುವ ಸಾಧ್ಯತೆಗಳು ಹೆಚ್ಚಿವೆ.

ಇದೇ ತಿಂಗಳ ೧೦ರಂದು ಬಿಹಾರ ವಿಧಾನಸಭೆಯ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಿವಾಸದಲ್ಲಿ ಜೆಡಿಯು ಮತ್ತು ಬಿಜೆಪಿ ಹಾಗೂ ಅದರ ಅಂಗ ಪಕ್ಷಗಳು ಸಭೆ ಸೇರಿ ಚರ್ಚೆ ನಡೆಸಿದ್ದವು ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ಕೇವಲ ೪೩ ಸ್ಥಾನಗಳನ್ನು ಪಡೆದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸಲು ನಿತೀಶ್ ಕುಮಾರ್ ಹಿಂದೇಟು ಹಾಕಿದ್ದರು.

ಚುನಾವಣೆಯಲ್ಲಿ ಬಿಜೆಪಿ ೭೪ ಸ್ಥಾನಗಳನ್ನು ಗೆದ್ದಿದೆ ತಾವು ಮುಖ್ಯಮಂತ್ರಿಯಾದರೆ ಎಲ್ಲಿ ಬಿಜೆಪಿ ನಾಯಕರಿಂದ ನಿಂದನೆ ಅನುಭವಿಸಬೇಕಾಗುತ್ತದೆ ಎನ್ನುವ ಮುನ್ನೆಚ್ಚರಿಕೆಯಿಂದ ರಾಜಕೀಯ ದಾಳ ಉರುಳಿಸಲು ನಿತೀಶ್ ಕುಮಾರ್ ಮುಂದಾಗಿದ್ದಾರೆ.

ಚುನಾವಣಾ ಪ್ರಚಾರ ಸಮಯದಲ್ಲಿ ಮುಂದಿನ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೇ ಎಂದು ಜನರ ಎದುರು ಪ್ರಕಟಿಸಿದ್ದೇವೆ ಹೀಗಾಗಿ ನೀವೇ ಮುಖ್ಯಮಂತ್ರಿಯಾಗಿ ಮುಂದುವರೆಯಿರಿ ಎಂದು ಬಿಜೆಪಿ ನಾಯಕರು ನಿತೀಶ್ ಕುಮಾರ್ ಅವರ ಮೇಲೆ ಒತ್ತಡ ಹೇರಿದ್ದಾರೆ.

ಹಕ್ಕು ಮಂಡನೆ:
ನಿತೀಶ್ ಕುಮಾರ್ ಅವರನ್ನು ಎನ್ ಡಿಎ ನೂತನ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಿದ್ದು ಸರ್ಕಾರ ರಚನೆಗೆ ಅವಕಾಶ ಮಾಡಿಕೊಡುವಂತೆ ರಾಜ್ಯಪಾಲರಿಗೆ ಹಕ್ಕು ಮಂಡನೆ ಮಾಡಲು ನಿರ್ಧರಿಸಿದ್ದಾರೆ.

೨೪೩ ವಿಧಾನಸಭೆಯ ಸಂಖ್ಯಾಬಲದಲ್ಲಿ ಮೂರು ಹಂತದಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಯು, ಬಿಜೆಪಿ ನೇತೃತ್ವದ ಮೈತ್ರಿಕೂಟ ೧೨೫ ಸ್ಥಾನಗಳನ್ನು ಗೆಲುವು ಸಾಧಿಸಿದ್ದು ಈ ಪೈಕಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷ ಕೇವಲ ೪೩ ಸ್ಥಾನಗಳನ್ನು ಪಡೆದಿದೆ ಬಿಜೆಪಿ ೭೪ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.
ಮಿತ್ರಪಕ್ಷಗಳಾದ ಹಿಂದುಸ್ತಾನಿ ಅವಾನ್ ಮೋರ್ಚಾ ಜಾತ್ಯತೀತ ಪಕ್ಷ ಹಾಗೂ ವಿಕಾಸ್ ಶೀಲ್ ಇನ್ ಸಾನ್ ಪಕ್ಷ ತಲಾ ನಾಲ್ಕು ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ.
ಆರ್ ಜೆ ಡಿ ಮತ್ತು ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ಪಕ್ಷ ೧೧೦ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ

ಖಾತೆ ಹಂಚಿಕೆ ಚರ್ಚೆ

ಬಿಹಾರದ ನೂತನ ಶಾಸಕಾಂಗ ಪಕ್ಷದ ನಾಯಕನಾಗಿ ನಿತೀಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಜೆಡಿ ಯು ಬಿಜೆಪಿ ಮತ್ತು ಮಿತ್ರಪಕ್ಷಗಳಿಗೆ ಸ್ಥಾನ ಹಂಚಿಕೆ ಯಾವ ಯಾವ ಖಾತೆ ನೀಡಬೇಕು ಎನ್ನುವುದು ಸೇರಿದಂತೆ ಹಲವು ಮಹತ್ವದ ವಿಷಯಗಳ ಕುರಿತು ಸಂಜೆ ವೇಳೆಗೆ ನಿರ್ಧಾರವಾಗುವ ಸಾಧ್ಯತೆಗಳು ಹೆಚ್ಚಿವೆ.

LEAVE A REPLY

Please enter your comment!
Please enter your name here