ವಿದ್ಯಾರ್ಥಿಗಳ ಬೋಧನಾ ಶುಲ್ಕದಲ್ಲಿ ಶೇ. 30ರಷ್ಟು ಕಡಿತ

0
180

ಬೆಂಗಳೂರು : ರಾಜ್ಯ ಸರ್ಕಾರ ಕೊನೆಗೂ ಪೋಷಕರ ಬೇಡಿಕೆಗೆ ಸ್ಪಂದಿಸಿದ್ದು ಎಲ್ಲಾ ಖಾಸಗಿ ಶಾಲೆಗಳ ವಿದ್ಯಾರ್ಥಿಗಳ ಬೋಧನಾ ಶುಲ್ಕದಲ್ಲಿ ಶೇ. 30 ರಷ್ಟು ಕಡಿತಗೊಳಿಸಲು ಆದೇಶಿಸಲಾಗಿದೆ. ಸುದ್ದಿಘೋಷ್ಠಿಯಲ್ಲಿಂದು ಮಾತನಾಡಿದ ಶಿಕ್ಷಣ ಸಚಿವ ಸುರೇಶ ಕುಮಾರ್ ಪೋಷಕ ಸಂಘಟನೆಗಳು ಶಿಕ್ಷಕ ಸಂಘಟನೆಗಳು ಹಾಗೂ ಎಲ್ಲಾ ಸಂಘಟನೆಗಳೊಂದಿಗೆ ಸಮಗ್ರ ಚರ್ಚೆ ಮಾಡಿದ ನಂತರ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದರು.

ಇದರಿಂದ ಲಕ್ಷಾಂತರ ಪೋಷಕರಿಗೆ ಸ್ವಲ್ಪ ಮಟ್ಟಿನ ನೆಮ್ಮದಿಯೆಯ ನಿಟ್ಟುಸಿರು ಬಿಡುವಂತಾಗಿದೆ, ಆದರೆ ಈಗಾಗಲೇ ಬೆಂಗಳೂರು ಸೇರಿದಂತೆ ವಿವಿಧ ನಗರ ಖಾಸಗಿ ಶಾಲೆಗಳು ಪೂರ್ಣ ಪ್ರಮಾಣದ ಬೋಧನಾ ಶುಲ್ಕವನ್ನು ಸಂಗ್ರಹಸಿಸಲಾಗಿದ್ದು ಇದನ್ನು ಸರಿದೂಗಿಸಿಕೊಂಡು ಹೋಗುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ.

2021 ಶೈಕ್ಷಣಿಕ ವರ್ಷದಲ್ಲಿ ಅಡ್ಮಿಷನ್ ಶುಲ್ಕ ಪಾವತಿಸಿದ್ದರೆ ಮುಂದಿನ ಶೈಕ್ಷಣಿಕ ವರ್ಷಕ್ಕೆ ಸರಿದೂಗಿಸಿಕೊಂಡು ಹೋಗಬೇಕು ಎಂದು ತಿಳಿಸಲಾಗಿದೆ . ಇದಕ್ಕೆ ಖಾಸಗಿ ಶಾಲೆಗಳು ಹೇಗೆ ಪ್ರತಿಕ್ರಯಿಸುತ್ತವೆ ಎಂಬುದನ್ನು ಕಾದು ನೋಡಬೆಕು. ಅಭಿವೃದ್ಧಿ ಶುಲ್ಕವಾಗಲಿ ಅಥವಾ ಇನ್ಯಾವುದೇ ರೀತಿಯ ಶುಲ್ಕವನ್ನು ಪಡೆಯಬಾರದು ಎಂದು ಖಾಸಗಿ ಶಾಲೆಗಳಿಗೆ ತಿಳಿಸಲಾಗಿದೆ.

# ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ :
ವಿದ್ಯಾರ್ಥಿ ಜೀವನದ 2ನೇ ಮಹತ್ವದ ಘಟ್ಟ ಎನಿಸಿದ ದ್ವಿತೀಯ ಪಿಯುಸಿ ಪರೀಕ್ಷೆಯು ಮೇ 24ರಿಂದ ಜೂ.10ರವರೆಗೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‍ಕುಮಾರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದ್ವಿತೀಯ ಪಿಯುಸಿಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಲಿದ್ದು, ಮೇ 24ರಿಂದ ಜೂನ್ 10ರವರೆಗೆ ವಿವಿಧ ವಿಷಯಗಳ ಕುರಿತು ಪರೀಕ್ಷೆಗಳು ನಡೆಯಲಿವೆ. ಕೊರೊನಾ ಮುಂಜಾಗ್ರತಾ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲಾಗುವುದು.

 

LEAVE A REPLY

Please enter your comment!
Please enter your name here