ಶಾಲಾ ಶುಲ್ಕ ಶೇ. 30 ರಷ್ಟು ಕಡಿತ ವಿರೊಧಿಸಿ ಖಾಸಗಿ ಶಾಲಾ ಸಂಸ್ಥೆಗಳು ಮತ್ತು ಶಿಕ್ಷಕರಿಂದ ಬೃಹತ್ ಪ್ರತಿಭಟನೆ.

ಶುಲ್ಕ ಕಡಿತದಿಂದ ಶಾಲಾ ಆಡಳಿತವು ತಮ್ಮ ಸಿಬ್ಬಂದಿಗೆ ಸಂಬಳ ನೀಡಲು ಸಾಧ್ಯವಾಗುವುದಿಲ್ಲ ಎಂದು ಹೋರಾಟಗಾರರು ಹೇಳಿದ್ದಾರೆ.

0
162

ಬೆಂಗಳೂರು, ಫೆಬ್ರವರಿ 23. ಶಾಲಾ ಶುಲ್ಕವನ್ನು ಶೇ. 30 ರಷ್ಟು ಕಡಿತಗೊಳಿಸಬೇಕು ಎಂದು ರಾಜ್ಯ ಪ್ರೌಢ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಸಾವಿರಾರು ಖಾಸಗಿ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿಗಳು ಬೆಂಗಳೂರಿನಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಿದರು.

‘ಕರ್ನಾಟಕದ ಖಾಸಗಿ ಅನುದಾನರಹಿತ ಶಾಲಾ ನಿರ್ವಹಣೆ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ಸಮನ್ವಯ ಸಮಿತಿ’ (KPMTCC) ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಖಾಸಗಿ ಶಾಲೆಗಳ ಸಾವಿರಾರು ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಮೆರವಣಿಗೆ ನಡೆಸಿದರು.

ಮಾನ್ಯ ಶಿಕ್ಷಣ ಮಂತ್ರಿಯವರ ಹಾಗೂ ಶಿಕ್ಷಣ ಇಲಾಖೆಯ ಗೊಂದಲಮಯ ಸುತ್ತೋಲೆ ಮತ್ತು ಮಾಧ್ಯಮಗಳಲ್ಲಿ ಬಿತ್ತರಿಸುತ್ತಿರುವ ಸುದ್ದಿಗಳಿಂದ ಪಾಲಕರಿಗೂ ಹಾಗೂ ವಿಶೇಷವಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸರಿಯಾದ ನಿರ್ಧಾರ ತೆಗೆದುಕೊಳ್ಳಲು ತೊಂದರೆಯಾಗಿದೆ.

ಪೋಷಕರು ಎದುರಿಸುತ್ತಿರುವ ಆರ್ಥಿಕ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಈ ಆದೇಶವನ್ನು ಹೊರಡಿಸಲಾಗಿದ್ದರೂ, ಶುಲ್ಕ ಕಡಿತದಿಂದ ಶಾಲಾ ಆಡಳಿತವು ತಮ್ಮ ಸಿಬ್ಬಂದಿಗೆ ಸಂಬಳ ನೀಡಲು ಸಾಧ್ಯವಾಗುವುದಿಲ್ಲ ಎಂದು ಹೋರಾಟಗಾರರು ಹೇಳಿದ್ದಾರೆ.

ಮೆಜೆಸ್ಟಿಕ್‌ನ ರೈಲ್ವೆ ನಿಲ್ದಾಣದಲ್ಲಿ ಸಾವಿರಾರು ಶಿಕ್ಷಕರು ಒಟ್ಟುಗೂಡಿದ ನಂತರ ಸ್ವಾತಂತ್ರ್ಯ ಉದ್ಯಾನವನಕ್ಕೆ     ಪ್ರತಿಭಟನಾ ಮೆರವಣಿಗೆ ನಡೆಸಿದರು.

LEAVE A REPLY

Please enter your comment!
Please enter your name here