ಸಿಂಧನೂರಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಬೃಹತ್ ಜಿಲ್ಲಾ ಸಮಾವೇಶ.

ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ಮತ್ತು 371ಜೆ ಅಡಿಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ಕೊಡಲು ಒತ್ತಾಯಿಸಿ ಈ ಸಮಾವೇಶ ನಡೆಯುತ್ತಿದೆ.

0
134

ಸಿಂಧನೂರಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಬೃಹತ್ ಜಿಲ್ಲಾ ಸಮಾವೇಶ.

ದಿನಾಂಕ: 11-07-2021 ರವಿವಾರದಂದು ಸಿಂಧನೂರಿನ ಅನ್ನದಾನೇಶ್ವರಿ ಕಲ್ಯಾಣ ಮಂಟಪದಲ್ಲಿ ರಾಯಚೂರು ಜಿಲ್ಲೆಯ ಖಾಸಗಿ ಶಿಕ್ಷಣ ಸಂಸ್ಥೆಗಳ ಬೃಹತ್ ಜಿಲ್ಲಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 10 ಗಂಟೆಗೆ ಸಮಾವೇಶ ಉದ್ಘಾಟನೆಗೊಳ್ಳಲಿದೆ, ಸಿಂಧನೂರಿನ ಮಾಜಿ ಶಾಸಕರಾದ ಶ್ರೀ ಮಾನ್ ಹಂಪನಗೌಡ ಬಾದರ್ಲಿ ಇವರ ಮುಂದಾಳತ್ವದಲ್ಲಿ ಜರುಗಲಿದೆ. ಈ ಸಮಾವೇಶದಲ್ಲಿ ಜಿಲ್ಲೆಯ ಜನ ಪ್ರತಿನಿಧಿಗಳು ಎಲ್ಲಾ ತಾಲೂಕಿನ ಅಧ್ಯಕ್ಷರುಗಳು,ಜಿಲ್ಲಾ ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಅತಿಥಿಗಳಾಗಿ ಬಾಗವಹಿಸಲಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ಮತ್ತು 371ಜೆ ಅಡಿಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ಕೊಡಲು ಒತ್ತಾಯಿಸಿ ಈ ಸಮಾವೇಶ ನಡೆಯುತ್ತಿದೆ.ಈ ಸಮಾವೇಶದಲ್ಲಿ ಕೋವಿಡ್-19 ರ ಹೊಡೆತದಿಂದ ತತ್ತರಿಸಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳ ಕುರಿತು ಚಿಂತನ-ಮಂಥನ ನಡೆಸಿ ಈ ಸಂಕಷ್ಟದಿಂದ ಹೂರಬರಲು ಸುದೀರ್ಘವಾಗಿ ಚರ್ಚಿಸಿ ಒಂದು ನಿರ್ಣಯಕ್ಕೆ ಬರಲು ಈ ಸಮಾವೇಶ ನಡೆಯುತ್ತಿದೆ. ಈ ಸಮಾವೇಶಕ್ಕೆ ಮಾನ್ವಿ ತಾಲೂಕ ಸೇರಿದಂತೆ ಜಿಲ್ಲೆಯ ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರುಗಳು ಈ ಜಿಲ್ಲಾ ಸಮಾವೇಶದಲ್ಲಿ ಬಾಗವಹಿಸಿ ಸಲಹೆ-ಸೂಚನೆಗಳನ್ನು ಕೊಡುವುದರ ಮೂಲಕ ಈ ಸಮಾವೇಶ ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಉಪಾಧ್ಯಕ್ಷರು ಹಾಗೂ ಮಾನ್ವಿ ತಾಲೂಕ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರು ಆಗಿರುವ ಹೆಚ್. ಶರ್ಪುದ್ದೀನ್ ಪೋತ್ನಾಳ ಹಾಗೂ ತಾಲೂಕ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಆಗಿರುವ ರಾಜು ತಾಳಿಕೋಟಿ ಇವರು ಜಂಟಿಯಾಗಿ ಪತ್ರಿಕೆ ಹೇಳಿಕೆ ಮೂಲಕ ವಿನಂತಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here