ಸಚಿವ ಶ್ರೀರಾಮುಲು ಅವರಿಂದ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟನೆ

0
73

ಇಂದು ಸಚಿವ ಶ್ರೀರಾಮುಲು ಅವರಿಂದ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟನೆ

ಸಿಂಧನೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ರಾಯಚೂರು ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಘ, ಬೆಂಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ನೂತನವಾಗಿ ನಗರದಲ್ಲಿ ನಿರ್ಮಾಣಗೊಂಡಿರುವ ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ಶುಕ್ರವಾರ ಬೆಳಗ್ಗೆ 10ಗಂಟೆಗೆ ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಅವರು ಉದ್ಘಾಟಿಸಲಿದ್ದಾರೆ ಎಂದು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಶಿವಮಾನಪ್ಪ ತಿಳಿಸಿದ್ದಾರೆ.
ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿಶೇಷ ಅಹ್ವಾನಿತರಾಗಿ ಉಸ್ತುವಾರಿ ಸಚಿವ ಆಚಾರ ಹಾಲಪ್ಪ ಬಸ್ಸಪ್ಪ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಭಾಗವಹಿಸಲಿದ್ದಾರೆ. ಶಾಸಕ ವೆಂಕಟರಾವ್ ನಾಡಗೌಡ ಅಧ್ಯಕ್ಷತೆವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲೆಯ ಎಲ್ಲಾ ಶಾಸಕರು, ಸಂಸದರು, ವಿವಿಧ ನಿಗಮಗಳ ಅಧ್ಯಕ್ಷರು, ನಗರಸಭೆ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರು, ಸರ್ಕಾರದ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here