ಹಿಂದೂಪರ ಸಂಘಟನೆಯಿಂದ 150 ಮಂದಿಗೆ ತ್ರಿಶೂಲ ಹಂಚಿಕೆ

ಮಂಗಳೂರಿನ ಕದ್ರಿಯಲ್ಲಿರುವ ವಿಶ್ವ ಹಿಂದೂ ಪರಿಷತ್ ಕಚೇರಿಯಲ್ಲಿ ಹಿಂದೂಪರ ಸಂಘಟನೆಯಿಂದ ತ್ರಿಶೂಲ ದೀಕ್ಷೆ

0
23

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನೈತಿಕ ಪೊಲೀಸ್ ಗಿರಿ ಪ್ರಕರಣಗಳ ನಡುವೆ ಹಿಂದೂ ಸಂಘಟನೆಗಳ ಕಾರ್ಯಕರ್ತರಿಗೆ ಆಯುಧ ಪೂಜೆಯಂದು ಶಸ್ತ್ರಾಸ್ತ್ರಗಳನ್ನು ಹಂಚಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.

ಮಂಗಳೂರಿನ ಕದ್ರಿಯಲ್ಲಿರುವ ವಿಶ್ವ ಹಿಂದೂ ಪರಿಷತ್ ಕಚೇರಿಯಲ್ಲಿ ಹಿಂದೂಪರ ಸಂಘಟನೆಯಿಂದ ತ್ರಿಶೂಲ ದೀಕ್ಷೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಹರಿತದ ಕತ್ತಿಯನ್ನು ಹಂಚಲಾಗಿದೆ. 150 ಮಂದಿಗೆ ತ್ರಿಶೂಲ ಹಂಚಲಾಗಿದೆ..

ತ್ರಿಶೂಲ ದೀಕ್ಷೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಅಲ್ಲದೆ ಈ ಕಾರ್ಯಕ್ರಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆಗಳು ಆರಂಭವಾಗಿದೆ. ತ್ರಿಶೂಲ ನೆಪದಲ್ಲಿ ಹರಿತದ ಕತ್ತಿಯನ್ನು ನೀಡಿ ಶಸ್ತ್ರ ಹಿಡಿಯಲು ಪ್ರೇರಣೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ.

ಇತ್ತೀಚೆಗೆ ಸುರತ್ಕಲ್ ಮತ್ತು ಮೂಡಬಿದಿರೆಯಲ್ಲಿ ಅನೈತಿಕ ಪೊಲೀಸ್‍ಗಿರಿ ಪ್ರಕರಣ ವರದಿ ಆಗಿತ್ತು. ಅನೈತಿಕ ಪೊಲೀಸ್‍ಗಿರಿಯನ್ನು ಖುದ್ದು ಸಿಎಂ ಬಸವರಾಜ ಬೊಮ್ಮಾಯಿಯವರೇ ಆಕ್ಷನ್-ರಿಯಾಕ್ಷನ್ ಎಂದು ಹೇಳಿ ಬಹಿರಂಗವಾಗಿ ಸಮರ್ಥಿಸಿಕೊಂಡಿದ್ದರು.

 

LEAVE A REPLY

Please enter your comment!
Please enter your name here