ಕೋವಿಡ್‌ನಲ್ಲಿ ಅವಿರತ ಸೇವೆ ಗುರುತಿಸಿ ಜಿಲ್ಲಾಡಳಿತದಿಂದ ಪೌರಾಯುಕ್ತರಿಗೆ ಸನ್ಮಾನ

ಆರ್.ವಿರೂಪಾಕ್ಷಮೂರ್ತಿ ಅವರ ಸೇವೆ ಶ್ಲಾಘನೀಯ ಎಂದು ನೂತನ ಜಿಲ್ಲಾಧಿಕಾರಿ ಡಾ.ಅವಿನಾಶ ಮೆನನ್ ಪ್ರಶಂಸೆ ವ್ಯಕ್ತಪಡಿಸಿದರು.

0
101

ಆರ್.ವಿರೂಪಾಕ್ಷಮೂರ್ತಿ ಅವರ ಸೇವೆ ಶ್ಲಾಘನೀಯ: ಡಿಸಿ ಪ್ರಶಂಸೆ
ಸಿಂಧನೂರು.ನ.೦೧ –
ಕೋವಿಡ್ ಸಂಕಷ್ಟದಲ್ಲಿ ಹಗಲಿರುಳು ತಮ್ಮ ಪ್ರಾಣವನ್ನು ಲೆಕ್ಕಿಸದೇ ಯುದ್ದೋಪಾದಿಯಲ್ಲಿ ಸೇವೆ ಸಲ್ಲಿಸಿದ ಸಿಂಧನೂರು ನಗರಸಭೆ ಪೌರಾಯುಕ್ತ ಆರ್.ವಿರೂಪಾಕ್ಷಮೂರ್ತಿ ಅವರ ಸೇವೆ ಶ್ಲಾಘನೀಯ ಎಂದು ನೂತನ ಜಿಲ್ಲಾಧಿಕಾರಿ ಡಾ.ಅವಿನಾಶ ಮೆನನ್ ಪ್ರಶಂಸೆ ವ್ಯಕ್ತಪಡಿಸಿದರು.

ಅವರು ಜಿಲ್ಲಾಡಳಿತದಿಂದ ಸೋಮವಾರ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಆಚರಣಾ ಸಮಾರಂಭದಲ್ಲಿ ಪೌರಾಯುಕ್ತ ಆರ್.ವಿರೂಪಾಕ್ಷಮೂರ್ತಿ ಅವರಿಗೆ ಸನ್ಮಾನಿಸಿ, ಜಿಲ್ಲಾ ಮಟ್ಟದ ರಾಜ್ಯೋತ್ಸವದ ಪ್ರಶಂಸನಾ ಪತ್ರ ನೀಡಿ ಮಾತನಾಡಿದರು. ಕೋವಿಡ್ ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಜೀವದ ಹಂಗು ತೊರೆದು ಜಿಲ್ಲೆಯ ಸಾರ್ವಜನಿಕರ ಹಾಗೂ ಸೋಂಕಿತರ ಹಾರೈಕೆ ಮತ್ತು ಆರೋಗ್ಯದ ಹಿತಕ್ಕಾಗಿ ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕಾಗಿ ಹಗಲಿರುಳು ಅವಿರತ ಶ್ರಮಿಸಿದ ಸರ್ಕಾರಿ ನೌಕರರ ಸೇವೆ ಅನನ್ಯವಾದುದ್ದು., ಕೋವಿಡ್ ತಡೆಗಟ್ಟಲು ಯುದ್ಧೋಪಾದಿಯಲ್ಲಿ ಸೇವೆ ಸಲ್ಲಿಸಿದ ಪೌರಾಯುಕ್ತ ಆರ್.ವಿರೂಪಾಕ್ಷಮೂರ್ತಿ ಅವರ ಸೇವೆ ಶ್ಲಾಘನೀಯವಾಗಿದೆ. ಆ ನಿಟ್ಟಿನಲ್ಲಿ ಅವರಿಗೆ ಜಿಲ್ಲಾ ಮಟ್ಟದ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಸಿಇಒ ಅಧ್ಯಕ್ಷ ಶೇಖ್ ತನ್ವೀರ್ ಆಸೀಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಅಪರ ಜಿಲ್ಲಾಧಿಕಾರಿ ದುರುಗೇಶ, ರಾಯಚೂರು ಸಹಾಯಕ ಆಯುಕ್ತ ಸಂತೋಷ ಕಾಮಗೌಡ, ತಹಸೀಲ್ದಾರ ಡಾ.ಹಂಪಣ್ಣ ಸಜ್ಜನ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

LEAVE A REPLY

Please enter your comment!
Please enter your name here