ದಲಿತ ಹೋರಾಟಗಾರರ ಮೇಲೆ ಹಲ್ಲೆ : ಆರೋಪಿಗಳ ಬಂಧನಕ್ಕೆ ಆಗ್ರಹ

ಕೌಂಟರ್ ಕೇಸ್ ಮಾಡುವ ಮೂಲಕ ದಲಿತ ಹೋರಾಟಗಾರರನ್ನು ಹಿಮ್ಮೆಟ್ಟಿಸಲು ಸಾಧ್ಯವೇ ಇಲ್ಲ

0
83

ದಲಿತ ಹೋರಾಟಗಾರರ ಮೇಲೆ ಹಲ್ಲೆ : ಆರೋಪಿಗಳ ಬಂಧನಕ್ಕೆ ಆಗ್ರಹ

ಲಿಂಗಸುಗೂರು : ಕರ್ನಾಟಕ ದಲಿತ ಸಂಘರ್ಷ ಸಮಿತಿ (ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ) ಸಂಘಟನೆಯ ಜಿಲ್ಲಾದ್ಯಕ್ಷ ಬಸವರಾಜ ನಕ್ಕುಂದಿಯವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಸಂಘಟನೆ ಕಾರ್ಯಕರ್ತರು ಆಗ್ರಹಿಸಿದರು.

ಸಹಾಯಕ ಆಯುಕ್ತ ರಾಹುಲ್ ಸಂಕನೂರರ ಮೂಲಕ ಪೋಲಿಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಿದ ಅವರು, ದಲಿತ ಹೋರಾಟಗಾರ ಬಸವರಾಜ ನಕ್ಕುಂದಿಯವರು ಮಾನವಿ ಪಟ್ಟಣದ ಪೆಟ್ರೋಲ್ ಬಂಕಿನಲ್ಲಿ ತಮ್ಮ ವಾಹನಕ್ಕೆ ಪೆಟ್ರೋಲ್ ಹಾಕಿಸುತ್ತಿರುವಾಗ ಅನುಮಾನಾಸ್ಪದವಾಗಿ ಅನ್ನಭಾಗ್ಯ ಅಕ್ಕಿಯ ಮೂಟೆ ಹೊತ್ತ ಲಾರಿಯೊಂದು ಕಂಡಿತು. ಕೂಡಲೇ ಕಾರ್ಯಪ್ರವೃತ್ತರಾದ ನಕ್ಕುಂದಿಯವರು ಸಂಬAಧಿಸಿದ ಇಲಾಖೆಗಳಿಗೆ ಮಾಹಿತಿ ನೀಡಿ ಅಕ್ರಮವಾಗಿ ಸಾಗಾಟವಾಗುತ್ತಿದ್ದ ಅನ್ನಭಾಗ್ಯ ಅಕ್ಕಿ ಹಾಗೂ ಲಾರಿಯನ್ನು ಅಧಿಕಾರಿಗಳ ವಶಕ್ಕೆ ಒಪ್ಪಿಸಿದ್ದಾರೆ. ಬಳಿಕ ಮನೆಗೆ ತೆರಳುತ್ತಿದ್ದ ವೇಳೆ ಇವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ.

ಹಲ್ಲೆಗೆ ಕಾರಣರಾಗಿರುವ ಆಲ್ದಾಳ ವೀರಭದ್ರಪ್ಪ, ಆಲ್ದಾಳ ಸಿದ್ದಲಿಂಗಪ್ಪ, ರಾಜು, ಖಾಜಾ, ರಮೇಶ ಎನ್ನುವ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಕ್ರಮ ವ್ಯವಹಾರ ಮಾಡಿದ್ದಲ್ಲದೇ ಮಾರಣಾಂತಿಕ ಹಲ್ಲೆ ಮಾಡಿರುವವರ ವಿರುದ್ಧ ದೂರು ದಾಖಲಾಗಿದ್ದರೂ ಪೋಲಿಸರು ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ. ಅಲ್ಲದೇ, ದಲಿತ ಹೋರಾಟಗಾರನ ವಿರುದ್ಧ ಕೌಂಟರ್ ಕೇಸ್ ದಾಖಲು ಮಾಡಿಕೊಂಡು ಅಕ್ರಮಕ್ಕೆ ಅನುಕೂಲ ಮಾಡಿಕೊಡುವ ಹುನ್ನಾರ ನಡೆದಿದೆ. ಕೂಡಲೇ ಈ ಬಗ್ಗೆ ಪರಿಶೀಲನೆ ಮಾಡಿ ಕೌಂಟರ್ ಕೇಸನ್ನು ಹಿಂಪಡೆಯಬೇಕು. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಂಘಟನೆಯ ಕಲ್ಯಾಣ ಕರ್ನಾಟಕ ವಿಭಾಗೀಯ ಪ್ರಧಾನ ಕಾರ್ಯದರ್ಶಿ ಉಮೇಶ ಐಹೊಳೇರ್, ತಾಲೂಕು ಅದ್ಯಕ್ಷ ಶಶಿಧರ ಹೊಸಮನಿ, ಉಪಾಧ್ಯಕ್ಷ ಶರಣಬಸವ ಗುಡದನಾಳ, ಪ್ರಧಾನ ಕಾರ್ಯದರ್ಶಿ ರಾಮಣ್ಣ ಹೊನ್ನಳ್ಳಿ, ಶಿವರೆಡ್ಡಿ ಅಸ್ಕಿಹಾಳ, ಚೆನ್ನಬಸವ ಹೆರೂರು, ನಾಗರಾಜ ಬಿ, ಶಿವಪುತ್ರ ಮಾಚನೂರು, ವಿರೇಶ ಕಾರ್ಲಕುಂಟಿ ಸೇರಿ ಇತರರು ಈ ಸಂದರ್ಭದಲ್ಲಿ ಇದ್ದರು.

LEAVE A REPLY

Please enter your comment!
Please enter your name here