ಮಕ್ಕಳನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ: ಶಾಸಕ ರಾಜಾ ವೆಂಕಟಪ್ಪ ನಾಯಕ

ಮಾನ್ವಿ ತಾಲ್ಲೂಕಿನ ಪೋತ್ನಾಳ ಗ್ರಾಮದ ನೂತನ ಪ್ರೌಢ ಶಾಲೆಯ ೧೧ ಕೊಠಡಿಗಳನ್ನು ಶಾಸಕ ರಾಜಾ ವೆಂಕಟಪ್ಪ ನಾಯಕ ಉದ್ಘಾಟಿಸಿದರು

0
97

ಮಕ್ಕಳನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ: ರಾಜಾ ವೆಂಕಟಪ್ಪ ನಾಯಕ

ಮಾನ್ವಿ: ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಅವರನ್ನು ದೇಶದ ಉತ್ತಮ ಪ್ರಜೇಗಳನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ತಿಳಿಸಿದರು

ತಾಲ್ಲೂಕಿನ ಪೋತ್ನಾಳ ಗ್ರಾಮದ ನೂತನ ಪ್ರೌಢ ಶಾಲೆಯ ೧೧ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಯೋಜನೆ ಅಡಿಯಲ್ಲಿ ಅಂದಾಜು ೧ಕೊಟಿ ೪೦ಲಕ್ಷ ವೆಚ್ಚದಲ್ಲಿ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗಿದೆ ಸರಕಾರವು ಶೇ೧೦೦ರಷ್ಟು ಸಾಕ್ಷರತೆ ಪ್ರಮಾಣಕ್ಕಾಗಿ ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ ನೀಡಿದ್ದು ಶಾಲಾ ಮಕ್ಕಳಿಗೆ ಬಿಸಿಯೂಟವನ್ನು ಪುನಃ ಪ್ರಾರಂಭಿಸಲಾಗಿದೆ ನೂತನ ಕಾಲೇಜು ಕಟ್ಟಡ ನಿರ್ಮಾಣಕ್ಕೆ ೧ಕೋಟಿ ೨೦ಲಕ್ಷ ಅನುದಾನವನ್ನು ನೀಡಲಾಗುವುದು ಪೋತ್ನಾಳ ಗ್ರಾಮದ ಅಭಿವೃದ್ದಿಗಾಗಿ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದ್ದು ೩೬ಲಕ್ಷ ವೆಚ್ಚದಲ್ಲಿ ಪಶು ಆಸ್ಪತ್ರೆ ಕಟ್ಟಡ ನಿರ್ಮಾಣವಾಗಿದ್ದು ರೈತರಿಗೆ ಅನುಕೂಲವಾಗಲಿದೆ, ಗ್ರಾಮಕ್ಕೆ ೧ಕೊಟಿ ವೆಚ್ಚದಲ್ಲಿ ಬಸ್ ನಿಲ್ದಾಣ ಮಂಜೂರು ಮಾಡಲಾಗುವುದು ಎಂದು ತಿಳಿಸಿದರು
ಶಾಲೆಯ ವಿದ್ಯಾರ್ಥಿಗಳು ಕೋರಿಕೆ ಬಸ್ ನಿಲುಗಡೆ ಮಾಡುವುದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಮನವಿ ಸಲ್ಲಿಸಿದರು

ಕಾರ್ಯಕ್ರಮದಲ್ಲಿ ಗ್ರಾ.ಪಂ.ಅಧ್ಯಕ್ಷೆ ಗಂಗಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ಗುಡಿಹಾಳ್, ಮುಖಂಡರಾದ ರಾಜಾ ರಾಮಚಂದ್ರನಾಯಕ,ಮುಖ್ಯಗುರು ಅಪರ್ಣ, ಶಾಲೆಯ ಭೂದಾನಿ ನವೀನ್ ನಾಡಗೌಡ, ಶಾಲಾ ಸುದ್ದಾರಣ ಸಮಿತಿಯ ಅಧ್ಯಕ್ಷ ಮಲ್ಲೇಶಪ್ಪ,ಖಲೀಲ ಖುರೇಷಿ,ಗೋಪಾಲನಾಯಕ,ಲೋಕೊಪಯೋಗಿ ಇಲಾಖೆಯ ಅಧಿಕಾರಿಗಳಾದ ಎ.ಇ.ಇ.ರಘುನಾಥ,ಎ.ಇ. ಗಜಾನನ, ಜಂಭೂನಾಥ,ನಾಗರಾಜ ಭೋಗವತಿ,ಚನ್ನಬಸವ, ಪಿ.ಡಿ.ಒ.ಚನ್ನರೆಡ್ಡಿ ಶಾಲೆಯ ಶಿಕ್ಷಕರು,ವಿದ್ಯಾರ್ಥಿಗಳು, ಸೇರಿದಂತೆ ಇನ್ನಿತರರು ಇದ್ದರು

LEAVE A REPLY

Please enter your comment!
Please enter your name here