ಅದರ್ಶ ವಿದ್ಯಾಲಯದಲ್ಲಿ ಮಕ್ಕಳ ದಿನಾಚರಣೆ

ಮಾನ್ವಿ: ತಾಲೂಕಿನ ನೀರಮಾನ್ವಿ ಗ್ರಾಮದಲ್ಲಿನ ಸರಕಾರಿ ಅದರ್ಶ ವಿಶ್ವವಿದ್ಯಾಲಯದಲ್ಲಿ ಪ್ರತಿಭಾವಂತ ವಿದ್ಯಾರ್ಥಿ ಜನಾರ್ಧನ ಪಾಣಿಯನ್ನು ಸನ್ಮಾನಿಸಿ ಗೌರವಿಸಲಾಯಿತು.

0
90

ಅದರ್ಶ ವಿಶ್ವವಿದ್ಯಾಲಯದಲ್ಲಿ ಮಕ್ಕಳ ದಿನಾಚರಣೆ

ಮಾನ್ವಿ: ತಾಲೂಕಿನ ನೀರಮಾನ್ವಿ ಗ್ರಾಮದಲ್ಲಿನ ಸರಕಾರಿ ಅದರ್ಶ ವಿಶ್ವವಿದ್ಯಾಲಯದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಆಚರಿಸಿ ಸಿಂಧನೂರಿನ ವಿಶ್ರಾಂತ ಪ್ರಾಧ್ಯಾಪಕ ವೆಂಕನಗೌಡ ವಟಗಲ್ ಮಾತನಾಡಿ ವಿದ್ಯಾರ್ಥಿಗಳು ನಮ್ಮ ಶಿಕ್ಷಕರು ಮಕ್ಕಳಲ್ಲಿ ಸಂಸ್ಕಾರವನ್ನು ಬೆಳೆಸಬೇಕು, ಸಂಸ್ಕೃತಿ,ಪರAಪರೆಯನ್ನು ಉಳಿಸಿ ಬೆಳೆಸುವ ರೀತಿಯಲ್ಲಿ ಮಕ್ಕಳಿಗೆ ಶಿಕ್ಷಕರು ಶಿಕ್ಷಣವನ್ನು ನೀಡಬೇಕು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸುವುದರಿಂದ ಇತರ ವಿದ್ಯಾರ್ಥಿಗಳಿಗೆ ಸ್ಪೂರ್ತಿ ತುಂಬುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ.ವಾರ್ಷಿಕ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿ ಜನಾರ್ಧನ ಪಾಣಿಯನ್ನು ಸನ್ಮಾನಿಸಿ ಗೌರವಿಸಿ ಮುಖ್ಯಗುರು ದೇವಯ್ಯ ಮಾತನಾಡಿ ಸರಕಾರಿ ಆದರ್ಶ ಶಾಲೆಯಲ್ಲಿ ಶಿಕ್ಷಕರ ಪರಿಶ್ರಮ ಹಾಗೂ ವಿದ್ಯಾರ್ಥಿಯ ಕಠಿಣ ಪರಿಶ್ರಮದಿಂದಾಗಿ ಕಳೆದ ಎಸ್.ಎಸ್.ಎಲ್.ಸಿ.ವಾರ್ಷಿಕ ಪರೀಕ್ಷೆಯಲ್ಲಿ ೬೨೫ ಅಂಕಗಳಿಗೆ ಅತಿಹೆಚ್ಚು ೬೨೧ ಅಂಕಗಳನ್ನು ವಿದ್ಯಾರ್ಥಿಪಡೆಯಲು ಸಾಧ್ಯವಾಗಿದೆ. ವಿದ್ಯಾರ್ಥಿಯು ರಾಯಚೂರಿನಲ್ಲಿ ಪಿ.ಯು.ಸಿಯಲ್ಲಿ ವಿಜ್ಞಾನ ವಿಷಯದಲ್ಲಿ ಅಧ್ಯಯನ ನಡೆಸುತ್ತಿದ್ದು. ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲವಾಗಬೇಕು ಎನ್ನುವ ಉದ್ದೇಶದಿಂದ ಶಾಲೆಯ ಪಾಲಕ ಮಂಡಳಿ ಹಾಗೂ ಶಿಕ್ಷಕರಿಂದ ೨೦ ಸಾವಿರ ನಗದು ಪುರಸ್ಕರ ನೀಡಿ ಸನ್ಮಾನಿಸಿ ಗೌರವಿಸಲಾಗುತ್ತಿದೆ ಎಂದು ತಿಳಿಸಿದರು.

ಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿ ಚಿನ್ಮಯಿ ಹಿರೇಮಠರವರಿಗೆ ಒಂದು ಸಾವಿರ ನಗದು ಪುರಸ್ಕಾರ ಹಾಗೂ ಶಾಲೆಯ ಪ್ರತಿ ತರಗತಿಯಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ತಲಾ ಐದುನೂರುರೂ ಮತ್ತು ರಾಜ್ಯೋತ್ಸವ ಅಂಗವಾಗಿ ಕನ್ನಡ ಬಾಷೆಯಲ್ಲಿ ಶುದ್ದವಾದ ಬರವಾಣಿಗೆಯುಳ್ಳ ಮಕ್ಕಳಿಗೆ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರಾದ ಶಾಂಭವಿ,ಪರಶುರಾಮ್, ಸಿದ್ದಪ್ಪ,ಮೆಹಬೂಬ್,ಎಸ್,ಡಿ.ಎಮ್.ಸಿ ಅಧ್ಯಕ್ಷರಾದ ಜಗದೀಶನಾಯಕ,ಸದಸ್ಯರಾದ ಉಮಾಪತಿ, ಶಾರದ, ಶಿವಗಂಗಾ, ಪ್ರತಿಭಾ, ಚೈತ್ರ, ಶಿವಪ್ಪ, ಶಿವಮೂರ್ತಿ,ಇದ್ದರು

ಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಶಾಲಾ ಸಂಸತ್ತಿನ ಪದಾಧಿಕಾರಿಗಳು ನಿರ್ವಹಿಸಿದ್ದು ವಿಶೇಷವಾಗಿತ್ತು.

೧೫-ಮಾನ್ವಿ-೨:

ಮಾನ್ವಿ: ತಾಲೂಕಿನ ನೀರಮಾನ್ವಿ ಗ್ರಾಮದಲ್ಲಿನ ಸರಕಾರಿ ಅದರ್ಶ ವಿಶ್ವವಿದ್ಯಾಲಯದಲ್ಲಿ ಪ್ರತಿಭಾವಂತ ವಿದ್ಯಾರ್ಥಿ ಜನಾರ್ಧನ ಪಾಣಿಯನ್ನು ಸನ್ಮಾನಿಸಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here