ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ತಾಲೂಕಿನ ಈರಲಗಡ್ಡಿ ಗ್ರಾಮದಲ್ಲಿನ ಸರಕಾರಿ ಶಾಲೆಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಗ್ರೇಡ್-೨ ತಹಸೀಲ್ದಾರ್ ಅಬ್ದುಲ್ ವಾಹಿದ್ ಮಾತನಾಡಿದರು.

0
94

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಮಾನ್ವಿ: ತಾಲೂಕಿನ ಈರಲಗಡ್ಡಿ ಗ್ರಾಮದಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧುವಾರ ತಾಲೂಕು ಆಡಳಿತವತಿಯಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಗ್ರೇಡ್-೨ ತಹಸೀಲ್ದಾರ್ ಅಬ್ದುಲ್ ವಾಹಿದ್ ಮಾತನಾಡಿ ನ.೧೯ರಂದು ಶನಿವಾರ ಬೆಳಿಗ್ಗೆ ೧೦ಗಂಟೆಗೆ ಹಿರೇಕೊಟ್ನೆಕಲ್ ಹೋಬಳಿಯ ಈರಲಗಡ್ಡಿ ಗ್ರಾಮದಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯಲ್ಲಿನ ಪೋಡಿ, ವಿವಿಧ ಮಾಶಾಸನ, ಪಹಣಿಗೆ ಸಂಬAಧಿಸಿದ ಸಮಸ್ಯೆಗಳನ್ನು ಪರಿಹರಿಸಿ ಕೊಳ್ಳಲು ತಮ್ಮ ಕೇಲಸಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದು ತಾಲೂಕು ಮಟ್ಟದ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಗ್ರಾಮವಾಸ್ಥವ್ಯದಲ್ಲಿ ಹಾಜರಿದ್ದು ಗ್ರಾಮದ ಜನರಿಂದ ಅರ್ಜಿಗಳನ್ನು ಪಡೆದು ಸ್ಥಳದಲ್ಲಿಯೇ ತಮ್ಮ ಸಮಸ್ಯೆಗಳನ್ನು ಪರಿಶೀಲಿಸಿ ಪರಿಹಾರವನ್ನು ನೀಡಲಿದ್ದು ಗ್ರಾಮದ ಜನರು ತಮ್ಮ ವಿವಿಧ ಇಲಾಖೆಗಳಲ್ಲಿ ಕೇಲಸಗಳಿಗೆ ಹಾಗೂ ಗ್ರಾಮದಲ್ಲಿನ ಸಮಸ್ಯೆಗಳು ಕುಂದುಕೊರತೆಗಳ ಬಗ್ಗೆ ಅರ್ಜಿಗಳನ್ನು ಸಲ್ಲಿಸಿ ಪರಿಹಾರವನ್ನು ಪಡೆಯಬಹುದು ಎಂದು ತಿಳಿಸಿದರು.

ತಾ.ಅರೋಗ್ಯಧಿಕಾರಿ ಡಾ.ಚಂದ್ರಶೇಖರಯ್ಯ ಸ್ವಾಮಿ ಮಾತನಾಡಿ ಗ್ರಾಮದಲ್ಲಿ ನಡೆಯುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಆರೋಗ್ಯ ಇಲಾಖೆಯಿಂದ ಗ್ರಾಮದ ಜನರಿಗೆ ಉಚಿತವಾಗಿ ಆರೋಗ್ಯ ತಪಾಸಣೆ ಹಾಗೂ ಔಷಾಧಿಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.

ಹಿರೇಕೊಟ್ನೆಕಲ್ ಹೋಬಳಿಯ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮದ ಜನರು ಸಭೆಯಲ್ಲಿ ಭಾಗವಹಿಸಿದರು.

ಈರಲಗಡ್ಡಿ ಗ್ರಾಮದಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿನ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ವನ್ನು ಗ್ರೇಡ್-೨ ತಹಸೀಲ್ದಾರ್ ಅಬ್ದುಲ್ ವಾಹಿದ್ ಪರಿಶೀಲಿಸಿ ಆಹಾರದ ಗುಣಮಟ್ಟವನ್ನು ಕಾಪಾಡುವಂತೆ ಶಾಲೆಯ ಮುಖ್ಯಗುರುಗಳಿಗೆ ಸೂಚಿಸಿದರು.

೧೭-ಮಾನ್ವಿ-:

ಮಾನ್ವಿ: ತಾಲೂಕಿನ ಈರಲಗಡ್ಡಿ ಗ್ರಾಮದಲ್ಲಿನ ಸರಕಾರಿ ಶಾಲೆಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಗ್ರೇಡ್-೨ ತಹಸೀಲ್ದಾರ್ ಅಬ್ದುಲ್ ವಾಹಿದ್ ಮಾತನಾಡಿದರು.

LEAVE A REPLY

Please enter your comment!
Please enter your name here