ವಿದ್ಯಾರ್ಥಿವೇತನವನ್ನು ಮುಂದುವರಿಸಲು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಮಾನ್ವಿ ಮತ್ತು ಅಲ್ಪಸಂಖ್ಯಾತ ಶಾಲಾ ವಿದ್ಯಾರ್ಥಿಗಳಿಂದ ಪ್ರತಿಭಟನೆ. 

ವಿದ್ಯಾರ್ಥಿವೇತನವು 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳು ಪ್ರಾಥಮಿಕ ಶಿಕ್ಷಣದಿಂದ ದೂರ ಉಳಿಯಬಾರದು ಎಂಬ ಆಶಯವನ್ನು ಹೊಂದಿದೆ ಅದಕ್ಕಾಗಿ ಸ್ಕಾಲರ್ಶಿಪ್ ಅನ್ನು ನೀಡಲಾಗುತ್ತಿದೆ ಎಂಬುದನ್ನು ಸರ್ಕಾರ ಮರೆತಿರುವುದು ದುರಂತ

0
304

ರದ್ದಾಗಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನವನ್ನು ಮುಂದುವರಿಸಲು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಮಾನ್ವಿ ಮತ್ತು ಅಲ್ಪಸಂಖ್ಯಾತ ಶಾಲಾ ವಿದ್ಯಾರ್ಥಿಗಳಿಂದ ಪ್ರತಿಭಟನೆ. 

ಮಾನ್ವಿ, ಡಿ. 01-   ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ ನ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯಲ್ಲಿ ಬರುವ 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಕೊಡುತ್ತಿದ್ದ ವಿದ್ಯಾರ್ಥಿ ವೇತನವನ್ನು ಈ ವರ್ಷದಿಂದ ರದ್ದುಗೊಳಿಸುವ ನಿರ್ಧಾರವನ್ನು ತೆಗೆದುಕೊಂಡ ಕೇಂದ್ರ ಸರ್ಕಾರದ ನಡೆಯ ಬಗ್ಗೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಮತ್ತು ಮಾನ್ವಿ ನಗರದ ಅಲ್ಪಸಂಖ್ಯಾತ ಶಾಲಾ ವಿದ್ಯಾರ್ಥಿಗಳು ಇಂದು ತಾಲೂಕ  ಆಡಳಿತ ಕಾರ್ಯಾಲಯದ ಮುಂದೆ   ಪ್ರತಿಭಟನೆ ನಡೆಸಿ ವಿಷಾದ ವ್ಯಕ್ತಪಡಿಸಿದರು

01 ರಿಂದ 08 ನೇ ತರಗತಿಯ ವಿದ್ಯಾರ್ಥಿಗಳು ಆರ್ಟಿಇ ಅಡಿಯಲ್ಲಿ ಬರುವ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಪಡೆಯುತ್ತಿದ್ದು, ಅವರಿಗೆ ಸ್ಕಾಲರ್ಶಿಪ್ ನ ಅಗತ್ಯತೆ ಬೀಳುವುದಿಲ್ಲ ಹಾಗಾಗಿ ಈ ನಿರ್ಧಾರವನ್ನು ಕೈಗೊಂಡಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ, ಇದು ಆರ್ಟಿಇ ಕಾಯ್ದೆಯ ತಪ್ಪು ವ್ಯಾಖ್ಯಾನವಾಗಿದೆ, ಮೂಲಭೂತ ಹಕ್ಕಾದ ಆರ್ಟಿಇ ಕಾಯ್ದೆಯನ್ನು ಅನುಷ್ಠಾನಗೊಳಿಸಲು ಸಹಕಾರಿಯಾಗುವ ಸ್ಕಾಲರ್ಶಿಪ್ ಅನ್ನು ಹೆಚ್ಚುವರಿ ಸವಲತ್ತು ಎಂಬಂತೆ ಬಿಂಬಿಸುವುದು ತಪ್ಪಾಗುತ್ತದೆ, ಮಕ್ಕಳ ಶಾಲಾ ದಾಖಲಾತಿಯನ್ನು ಖಚಿತಪಡಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಅದರ ಭಾಗವಾಗಿ ಸ್ಕಾಲರ್ಶಿಪ್ ಅನ್ನು ಜಾರಿಗೆ ತರಲಾಗಿದೆ ಎಂಬುದನ್ನು ಕೇಂದ್ರ ಸರ್ಕಾರ ಮನವರಿಕೆ ಮಾಡಿಕೊಳ್ಳಬೇಕಾಗಿದೆ ಆದರೆ ಕೇಂದ್ರ ಸರ್ಕಾರವು ಜನವಿರೋಧಿ ರೈತ ವಿರೋಧಿ ನೀತಿಗಳನ್ನ ತಂದಿದ್ದು ಎಲ್ಲರಿಗೂ ಜಗಜ್ಜಯಿರ ಇದೀಗ ವಿದ್ಯಾರ್ಥಿ ವಿರೋಧಿ ನೀತಿಯು ಸಹ ಅನುಸರಿಸುತ್ತಿರುವುದು ಖಂಡನಾರ್ಹ ಎಂದು ಪುರಸಭೆ ಸದಸ್ಯ ಹಾಗೂ ಪಕ್ಷದ ಜಿಲ್ಲಾ ಅಧ್ಯಕ್ಷ ಮೌಲಾನಾ ಶೇಕ್ ಫರೀದ್ ಉಮರಿ ಹೇಳಿದರು ಅವರಿಂದು ಮಾನ್ಯ ರಾಷ್ಟ್ರಪತಿಗಳಿಗೆ ಮನವಿ ಪತ್ರ ಕೊಡುವ ಸಂದರ್ಭ ದಲ್ಲಿ ಭಾಷಣ ಮಾಡಿ ಮಾತನಾಡಿದರು.

ಪಕ್ಷದ ತಾಲೂಕಾ ಅಧ್ಯಕ್ಷ ಶೇಕ್ ಬಾಬಾ ಹುಸೇನ್ ಮಾತನಾಡಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿವೇತನವು 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳು ಪ್ರಾಥಮಿಕ ಶಿಕ್ಷಣದಿಂದ ದೂರ ಉಳಿಯಬಾರದು ಎಂಬ ಆಶಯವನ್ನು ಹೊಂದಿದೆ ಅದಕ್ಕಾಗಿ ಸ್ಕಾಲರ್ಶಿಪ್ ಅನ್ನು ನೀಡಲಾಗುತ್ತಿದೆ ಎಂಬುದನ್ನು ಸರ್ಕಾರ ಮರೆತಿರುವುದು ದುರಂತ ಎಂದು ತಿಳಿಸಿದರು.

ನಂತರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಂ ಏ ಏರ್ ಮುಖೀಮ್ ಮಾತನಾಡಿ ಮಕ್ಕಳ ಶಾಲಾ ದಾಖಲಾತಿಯನ್ನು ಖಚಿತಪಡಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ, ಕೇಂದ್ರದ ಈ ವಿದ್ಯಾರ್ಥಿ ವಿರೋಧಿ ನೀತಿಯು ಸಂವಿಧಾನದ ಮೂಲಭೂತ ಹಕ್ಕಾದ ಶಿಕ್ಷಣದ ಹಕ್ಕನ್ನು ದುರ್ಬಲಗೊಳಿಸುವ ಪ್ರಯತ್ನವಾಗಿದೆ. ರಾಜ್ಯ ಮತ್ತು ದೇಶದ ವಿವಿಧ ರಾಜ್ಯಗಳಲ್ಲಿ ಕೊರೋನಾ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಲಕ್ಷಾಂತರ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಹಿನ್ನೆಲೆಯುಳ್ಳ ಮಕ್ಕಳು ಶಾಲೆಯಿಂದ ಹೊರಗುಳಿದ ಬಗ್ಗೆ ಇತ್ತೀಚೆಗೆ ಕರ್ನಾಟಕ ಹೈಕೋರ್ಟ್ ನೇಮಿಸಿದ್ದ ಸಮಿತಿಯು ಬಹಿರಂಗಪಡಿಸಿದ್ದ ವರದಿಯು ಅತ್ಯಂತ ಕಳವಳಕಾರಿ ಸಂಗತಿಯಾಗಿತ್ತು, ಇದೀಗ ಆ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರಲು ಸಾಧ್ಯವಾಗುವ ಎಲ್ಲ ರೀತಿಯ ಸೌಲಭ್ಯ ಮತ್ತು ಸೌಕರ್ಯಗಳನ್ನು ಒದಗಿಸಲು ಯೋಜನೆ ರೂಪಿ‌ಸಬೇಕಾದ ಹೊತ್ತಲ್ಲಿ, ಕೇಂದ್ರದ ಇಂತಹ ಶಿಕ್ಷಣ ವಿರೋಧಿ ನಡೆಯು ದೇಶದ ಸಾಕ್ಷರತಾ ಪ್ರಮಾಣವನ್ನು ಕುಂಠಿತಗೊಳಿಸುತ್ತದೆ.

ಆದ್ದರಿಂದ ಗೌರವಾನ್ವಿತ ರಾಷ್ಟ್ರಪತಿಗಳಲ್ಲಿ ವಿನಂತಿ ಮಾಡುವುದು ಏನೆಂದರೆ ತಾವು ಮಧ್ಯಸ್ಥಿಕೆ ವಹಿಸಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಆಗುತ್ತಿರುವ ಈ ಅನ್ಯಾಯವನ್ನು ತಡೆಯಬೇಕೆಂದು ಈ ಮೂಲಕ ಮಾನ್ಯ ರಾಷ್ಟ್ರಪತಿಗಳನ್ನ ಗೌರವಪೂರ್ವಕವಾಗಿ ಆಗ್ರಹಿಸುತ್ತೇವೆಎಂದು ಅವರು ಹೇಳಿದರು

ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನ ಉದ್ದೇಶಿಸಿ ಏಸ್ ಐಓ ಸಂಘದ ಅಧ್ಯಕ್ಷ ಸಮೀರ್ ಪಾಷ,ಅಲ್ ಫುರ್ಖಾನ್ ಶಾಲೆಯ ಮುಖ್ಯ ಶಿಕ್ಷಕ ಮೊಹಮ್ಮದ್ ರಫಿ, ಅಲ್ ಹಿರಾ ಶಾಲೆಯ ಸಹ ಶಿಕ್ಷಕಿ ಶ್ರೀಮತಿ ನಾಜ್ನೀನ್ ಬೇಗಂ ಮತ್ತು ಪ್ರಧಾನ ಕಾರ್ಯದರ್ಶಿ ನಾಸಿರ್ ಅಲಿ ಮಾತನಾಡಿ ಕೇಂದ್ರ ಸರ್ಕಾರ ದವಿರುದ್ದ ಅಸಮಧಾನ ವ್ಯಕ್ತಪಡಿಸಿದರು. ನಂತರ ಮಾನ್ಯ ರಾಷ್ಟ್ರಪತಿಗಳಿಗೆ ಮಾನ್ಯ ತಹಶೀಲ್ದಾರ್ ರ ಮುಖಾಂತರ ಮನವಿ ಪತ್ರ ಕೊಡಲಾಯಿತು.

ಗ್ರೇಡ್ 2 ತಹಸೀಲ್ದಾರ್ ಶ್ರೀ ಅಬ್ದುಲ್ ವಾಹಿದ್ ರವರು ಮನವಿ ಪತ್ರ ಸ್ವೀಕರಿಸಿದರು ಮಾನ್ಯ ಜಿಲ್ಲಾಧಿಕಾರಿ ಗಳ ಮುಖಾಂತರ ಮಾನ್ಯ ರಾಷ್ಟ್ರಪತಿಗಳಿಗೆ ತಮ್ಮ ಬೇಡಿಕೆಯನ್ನ ಕಳುಹಿಸಿ ಕೊಡಲಾಗುವುದೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಶೇಕ್ ಬಾಬಾ ಹುಸೇನ್ ತಾಲೂಕ ಅಧ್ಯಕ್ಷ, ಶೇಕ್ ಫರೀದ್ ಉಮರಿ ಜಿಲ್ಲಾ ಅಧ್ಯಕ್ಷರ, ಎಂ ಎ ಎಚ್ ಮುಕೀಮ್ ಸಂಘಟನಾ ಕಾರ್ಯದರ್ಶಿಗಳು, ನಾಸಿರ್ ಅಲಿ ಪ್ರಧಾನ ಕಾರ್ಯದರ್ಶಿಗಳು, ಸಮೀರ್ ಪಾಷಾ ಎಸ್ಐಒ ತಾಲೂಕ ಅಧ್ಯಕ್ಷರು, ಮತ್ತು ಕಾರ್ಯಕರ್ತರಾದ ರಫಿ ಬಾಗಲಕೋಟ್ ಹಬೀಬ್ ಸಹಾರ ,ಇಂತಯಾಸ್, ಶರಪುದ್ದೀನ್, ಸರ್ವ ಧರ್ಮ ಸೇವಾ ಸಂಘದ ಅಧ್ಯಕ್ಷರಾದ ಹನುಮಂತ ಕೋಟೆ, ಶೈನಾಜ್ ಮೋಲ್ವಿ ಸಾಬ್ , ಖಾಜಾ ಮೈನುದ್ದೀನ್ ಬಾಬು, ಅಲ್ಫ್ರಾನ್ ಶಾಲೆಯ ಮುಖ್ಯ ಉಪಾಧ್ಯಾಯರು ಮೊಹಮ್ಮದ್ ರಫಿ ಜ್ಞಾನ ನಿಧಿ ಶಾಲೆಯ ಅನಿಲ್ ಕುಮಾರ್, ಇಲಿಯಾಸ್ ಗಚ್ಚಿ, ಲಿಟಲ್ ಸ್ಟಾರ್ ಶಾಲೆಯ ಮುಖ್ಯಸ್ಥ ಅಬ್ದುಲ್ ರಹೀಮ್ ಡಾ. ನೂರುಲ್ ಹಸನ್ ಮತ್ತು ಅಲ್ ಹೀರಾ ಶಾಲೆಯ ಸಹಶಿಕ್ಷಕಿ ಶ್ರೀಮತಿ ನಾಜ್ನೀನ್ ಬೇಗಂ ಮತ್ತು ಅಬ್ದುಲ್ ಕಲಾಂ ಆಜಾದ್ ಶಾಲೆಯ ಶಿಕ್ಷಕರು, ಕರ್ನಾಟಕ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿ ವೇತನ ದಿಂದ ವಂಚಿತರಾವಂಚಿತರಾಗುುವ ವಿವಿಧ ಅಲ್ಪಸಂಖ್ಯಾತ ಶಾಲೆಗಳ  ಸುಮಾರು 500 ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here