ರಾಯಚೂರು,ಡಿ.28.- 2019-20ನೇ ಸಾಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಹುದ್ದೆಯಿಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಹಿರಿಯ ಮುಖ್ಯ ಶಿಕ್ಷಕರ (ಪದವಿಧರೇತರ) ಹುದ್ದೆಗೆ ಹಾಗೂ ಸರಕಾರಿ ಉರ್ದು ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಹುದ್ದೆಯಿಂದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಲು 2019ರ ಡಿಸೆಂಬರ್ 31ರಂದು ಬೆಳಿಗ್ಗೆ 11 ಗಂಟೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯ ಎಸ್‍ಎಸ್‍ಎ ಸಭಾಂಗಣದಲ್ಲಿ ಕೌನ್ಸೆಲಿಂಗ್ ಹಮ್ಮಿಕೊಳ್ಳಲಾಗಿದೆ.
1:2ರ ಕೌನ್ಸಿಲಿಂಗ್ ಪಟ್ಟಿಯಲ್ಲಿರುವ ಶಿಕ್ಷಕರು ನಿಗಧಿತ ಸಮಯಕ್ಕೆ ಹಾಜರಾಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.