ಆಶಾ ಕಾರ್ಯಕರ್ತೆಯರ 10 ಬೇಡಿಕೆಗಳ ಪೈಕಿ 07ಕ್ಕೆ ಸ್ಪಂದಿಸಿದ ಸಚಿವ ಬಿ ಶ್ರೀ ರಾಮುಲು.

0
379

ಬೆಂಗಳೂರು. ಜ 03-  ಮಾಸಿಕ ಕನಿಷ್ಠ ಗೌರವಧನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಾವಿರಾರು ಸಂಖ್ಯೆಯಲ್ಲಿ ಆಶಾ ಕಾರ್ಯಕರ್ತೆಯರು ಶುಕ್ರವಾರ ಉದ್ಯಾನನಗರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು

ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಆಶಾ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್ ವರೆಗೆ ಜಾಥಾ ನಡೆಸುವ ಮೂಲಕ ಕಳೆದ ಹದಿನೈದು ತಿಂಗಳ ಪ್ರೋತ್ಸಾಹ ಧನವನ್ನು ಕೂಡಲೇ ಪಾವತಿಸುವಂತೆ ಈ ಸಂದರ್ಭದಲ್ಲಿ ಒತ್ತಾಯಿಸಿ ಸರಕಾರದ ಮುಂದೆ ಹತ್ತು ಬೇಡಿಕೆಗಳನ್ನ ಇತ್ತರು

ಆಶಾ ಕಾರ್ಯಕರ್ತೆಯರ ಪ್ರತಿಭಟನೆಗೆ ಸ್ಪಂದಿಸಿ ಆರೋಗ್ಯ ಸಚಿವ ಶ್ರೀರಾಮುಲು ಪ್ರತಿಕ್ರಿಯಿಸಿ ನವದೆಹಲಿಯಲ್ಲಿ ಮಾತನಾಡಿದ ಅವರು ಆರ್ಥಿಕ ಕಾರಣಗಳಿಂದ ಕೂಡಲೇ ಆಶಾ ಕಾರ್ಯಕರ್ತರ ಸಂಬಳ ಹೆಚ್ಚು ಮಾಡಲು ಸಾಧ್ಯವಿಲ್ಲ. ಸಿಎಂ ಯಡಿಯೂರಪ್ಪ ಅವರ ಜೊತೆಗೆ ಮಾತನಾಡಿ ಸಂಬಳ ಹೆಚ್ಚಿಸುವ ಬಗ್ಗೆ ಚರ್ಚಿಸುತ್ತೇನೆ ಎಂದು ಹೇಳಿದ್ದಾರೆ

ನವದೆಹಲಿಯಲ್ಲಿ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವ ಪ್ರಯತ್ನ ಮಾಡುತ್ತಿದ್ದೇವೆ. ಈ ಮೊದಲು 5500 ರೂ. ಸಂಬಳ ನೀಡಲಾಗುತ್ತಿತ್ತು. ನಮ್ಮ ಸರ್ಕಾರ ಬಂದ್ಮೇಲೆ ಅದನ್ನು 6,000 ರೂ. ಮಾಡಿದ್ದೇವೆ. ಸಿಎಂ ಜೊತೆಗೆ ಚರ್ಚಿಸಿ ಸಂಬಳವನ್ನು 7,000 ರೂ. ಮಾಡುವ ಪ್ರಯತ್ನ ಮಾಡುತ್ತೇನೆ. ಸದ್ಯ ಆಶಾ ಕಾರ್ಯಕರ್ತೆಯರು 12,000 ರೂ.ಗೆ ಬೇಡಿಕೆ ಇಟ್ಟಿದ್ದಾರೆ. ಇಷ್ಟು ಪ್ರಮಾಣದಲ್ಲಿ ಸಂಬಳ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು

ಆಯುಷ್ಮಾನ್ ಭಾರತ ಯೋಜನೆಯಡಿ ಬಿಪಿಎಲ್ ಕಾರ್ಡ್ ನೀಡಲು ಕೇಳಿದ್ದನ್ನು ಒಪ್ಪಿದ್ದೇವೆ. ಆಶಾ ಕಾರ್ಯಕರ್ತರಿಗೆ ಫೋರ್ಟಲ್ ನಲ್ಲಿ ಮಾಹಿತಿ ನೀಡಲು ಹೇಳಿದ್ದೇನೆ. ಎಎನ್‍ಎಂ ಗಳು ತಕ್ಷ ತಕ್ಷಣ ಮಾಹಿತಿ ನೀಡಲು ಸೂಚನೆ ನೀಡಿದ್ದೇನೆ. 6 ಸಾವಿರ ರೂ.ಗಳನ್ನು ಏಕಕಾಲಕ್ಕೆ ಸಂಬಳ ನೀಡಲು ಸೂಚನೆ ನೀಡಲಾಗಿದೆ. ಆಶಾ ಕಾರ್ಯಕರ್ತರ ಸಮಸ್ಯೆಗೆ ಸ್ಪಂದಿಸಲು ವಾಟ್ಸಪ್ ಗ್ರೂಪ್ ಕೂಡ ಮಾಡಲಾಗಿದೆ.

LEAVE A REPLY

Please enter your comment!
Please enter your name here