ಡಿ.ಎ.ಆರ್. ಪೊಲೀಸ್ ಮೈದಾನದಲ್ಲಿ 26 ರಂದು ಜರುಗುವ ವಿಜೃಂಭಣೆಯ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ

0
274

ರಾಯಚೂರು.10:- ಇದೇ ಜನವರಿ 26 ರಂದು ನಗರದ ಜಿಲ್ಲಾ ಪೊಲೀಸ್ ಡಿ.ಆರ್ ಮೈದಾನದಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸೇರಿದ್ದ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ನಿರ್ಣಯಿಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಅವರು ಮಾತನಾಡಿ, ಪ್ರತಿಬಾರಿಯಂತೆ ಈ ಬಾರಿಯೂ ನಗರದ ಡಿ.ಎ.ಆರ್. ಪೊಲೀಸ್ ಮೈದಾನದಲ್ಲಿ ಜ.26 ರಂದು ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲು ವಿವಿಧ ಇಲಾಖೆ ವತಿಯಿಂದ ಕೈಗೊಳ್ಳಬೇಕಾದ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅಪರ ಜಿಲ್ಲಾಧಿಕಾರಿ ದುರುಗೇಶ್ ಅವರು ಮಾತನಾಡಿ, ಜ.26ರ ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡುವರು, ಈ ನಿಟ್ಟಿನಲ್ಲಿ ಧ್ವಜಾರೋಹಣ ಸಿದ್ದತೆ, ವೇದಿಕೆ ಹಾಗೂ ಧ್ವಜಕಟ್ಟೆಗಳನ್ನು ತೋಟಗಾರಿಕೆ ಇಲಾಖೆ ವತಿಯಿಂದ ಅಲಂಕರಿಸುವುದು, ನಗರಸಭೆಯಿಂದ ಡಿ.ಆರ್. ಪರೇಡ್ ಮೈದಾನದಲ್ಲಿ ಸ್ಪಚ್ಚತೆ ನಿರ್ವಹಿಸುವುದು, ಕುಡಿಯುವ ನೀರು ಪೂರೈಸುವುದು, ಲೋಕೋಪಯೋಗಿ ಇಲಾಖೆ ವತಿಯಿಂದ ಮೈದಾನವನ್ನು ಸಮತಟ್ಟುಗೊಳಿಸುವುದು ಹಾಗೂ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸುವ ಕಾರ್ಯಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಇದೇ ಕಾರ್ಯಕ್ರಮದಲ್ಲಿ ಅತ್ಯುತ್ತಮ ಸರ್ಕಾರಿ ಸೇವೆ ಸಲ್ಲಿಸಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಗುವುದು, ಅದಕ್ಕಾಗಿ ಇದೇ ಮಾಹೆಯ 15 ರೊಳಗೆ ಅರ್ಜಿ ಸಲ್ಲಿಸಬೇಕು ಎಂದರು.
ಡಿ.ಎ.ಆರ್. ಪೊಲೀಸ್ ಮೈದಾನಕ್ಕೆ ಬರುವ ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಲಘು ಉಪಹಾರದ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಪ್ರತಿ 50 ಮಂದಿ ವಿದ್ಯಾರ್ಥಿಗಳ ಮೇಲುಸ್ತುವಾರಿಗೆ ಒಬ್ಬರು ಶಿಕ್ಷಕರನ್ನು ನಿಯೋಜಿಸುವಂತೆ ಜಿಲ್ಲಾಧಿಕಾರಿಯವರು ಸಲಹೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಿ.ಬಿ. ವೇದಮೂರ್ತಿ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಬಿರಾದರ ಸ್ವಾಗತಿಸಿದರು.

ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನ:
ಜಿಲ್ಲಾವಾರು ಹಂತದಲ್ಲಿ 10 ಪ್ರಶಸ್ತಿಗಳನ್ನು ನೀಡಲಾಗುತ್ತಿದ್ದು, ಸರ್ಕಾರಿ ಸೇವೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಅಥವಾ ಸಾಧನೆ ಮಾಡಿದ ರಾಜ್ಯ ಸರ್ಕಾರಿ ಅಧಿಕಾರಿ, ನೌಕರರಿಗೆ 10 ಸಾವಿರ ರೂ.ಗಳ ನಗದು ಬಹುಮಾನ, ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
ಅರ್ಜಿ ಸಲ್ಲಿಸಲು ಇದೇ ಜ.15 ಕೊನೆಯ ದಿನವಾಗಿದೆ. ಅರ್ಜಿಗಳನ್ನು ನಗರದ ಜಿಲ್ಲಾಧಿಕಾರಿಯವರ ಕಾರ್ಯಾಲಯದ ಸಂಕಿರ್ಣ ವಿಭಾಗಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಮಲ್ಲೇಶ್ ಮೊ:9142211112 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here