BPL ಕಾರ್ಡ್ ದಾರರಿಗೆ ಶಾಕ್ ಕೊಟ್ಟ ಸರಕಾರ

0
212

ಬೆಂಗಳೂರು : ಬಿಪಿಎಲ್ ಕಾರ್ಡ್ ದಾರರಿಗೆ ಆಹಾರ ಇಲಾಖೆಯು ಶಾಕಿಂಗ್ ಸುದ್ದಿಯೊಂದನ್ನು ನೀಡಿದ್ದು, ಬಿಪಿಎಲ್ ಕುಟುಂಬದ ಸದಸ್ಯರಿಗೆ 7 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ ನೀಡುವಂತೆ ಆಹಾರ ಇಲಾಖೆ ಸರ್ಕಾರಕ್ಕೆ ಶಿಫಾರಸು ಮಾಡಿದೆ ಎನ್ನಲಾಗಿದೆ.

ಬಿಪಿಎಲ್ ಕುಟುಂಬ ಸದಸ್ಯರಿಗೆ 5 ಕೆಜಿ ಅಕ್ಕಿ ಜೊತೆಗೆ, 1 ಕೆಜಿ ತೊಗರಿ ಬೇಳೆ ನೀಡಲು ಆಹಾರ ಇಲಾಖೆ ಶಿಫಾರಸು ಮಾಡಿದೆ. ಪ್ರತಿ ಕುಟುಂಬ ಸದಸ್ಯರಿಗೆ 5 ಕೆಜಿ ಅಕ್ಕಿ ಕೊಟ್ಟರೆ ಸಾಕಷ್ಟು ಪ್ರಮಾಣದ ಅಕ್ಕಿ ದುರುಪಯೋಗವಾಗುವುದನ್ನು ತಪ್ಪಿಸಲು ಇಲಾಖೆ ಕ್ರಮ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ.

ಕೇಂದ್ರ ಸರ್ಕಾರವು ಒಬ್ಬರಿಗೆ 5 ಕೆಜಿ ಅಕ್ಕಿ ನೀಡುತ್ತಿದೆ. ಇದಕ್ಕೆ 65 ಕೋಟಿ ರೂ. ವೆಚ್ಚವಾಗುತ್ತಿದೆ. ಆದರೆ, ರಾಜ್ಯ ಸರ್ಕಾರ ಹೆಚ್ಚುವರಿಯಾಗಿ 2 ಕೆಜಿ ಅಕ್ಕಿಯನ್ನು ಮುಕ್ತ ಮಾರುಕಟ್ಟೆಯಲ್ಲಿ 29 ರೂ.

ದರದಲ್ಲಿ 83 ಸಾವಿರ ಮೆಟ್ರಿಕ್ ಟನ್ ಅಕ್ಕಿ ಖರೀದಿಸಿ ಗ್ರಾಹಕರಿಗೆ ಪೂರೈಸುತ್ತಿದೆ. ಇದರಿಂದ ರಾಜ್ಯ ಸರ್ಕಾರಕ್ಕ ಮಾಸಿಕ 190 ಕೋಟಿ ರೂ. ವೆಚ್ಚವಾಗುತ್ತಿದೆ. ಎರಡು ಕೆಜಿ ಅಕ್ಕಿ ನಿಲ್ಲಿಸಿದರೆ ರಾಜ್ಯ ಸರ್ಕಾರಕ್ಕೆ ವಾರ್ಷಿಕ 2000 ಕೋಟಿ ರೂ. ಉಳಿತಾಯವಾಗಲಿದೆ ಎಂದು ಅಂದಾಜಿಸಲಾಗಿದೆ.

LEAVE A REPLY

Please enter your comment!
Please enter your name here