ತಂಬಾಕು ಮಾರಾಟ ಮಳಿಗೆಗಳ ಮೇಲೆ ದಾಳಿ: 51 ಪ್ರಕರಣ ದಾಖಲು, 7900 ರೂ.ಗಳ ದಂಡ ವಸೂಲಿ.

0
194

ರಾಯಚೂರು,ಮಾ.03- ಕೋಟ್ಪಾ ಕಾಯ್ದೆ-2003ರಡಿ ತಂಬಾಕು ಮಾರಾಟ ಮಾಡುವ ಮಳಿಗೆಗಳ ಮೇಲೆ ಅಧಿಕಾರಿಗಳ ತಂಡವು ನಗರದ ವಿವಿಧೆಡೆ ಮಾ.3ರ ಮಂಗಳವಾರ ದಾಳಿ ನಡೆಸಿ, 51 ಪ್ರಕರಣಗಳನ್ನು ದಾಖಲಿಸಿ ಒಟ್ಟು 7900 ರೂ.ಗಳ ದಂಡವನ್ನು ವಸೂಲಿ ಮಾಡಿದೆ.
ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಇತರೆ ಇಲಾಖೆಯ ಸಹಯೋಗದೊಂದಿಗೆ ತಂಬಾಕು ಮಾರಾಟ ಮಾಡುವ ಮಳಿಗೆಗಳ ಮೇಲೆ ದಾಳಿ ಒಟ್ಟು 51 ಪ್ರಕರಣಗಳು ದಾಖಲಿಸಿ 7900 ರೂ.ಗಳ ದಂಡ ವಿಧಿಸಿದೆ.
ಕೋಟ್ಪಾ ಕಾಯ್ದೆ-2003 ರ ಸೆಕ್ಷನ್ 4 ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುವುದು ನಿಷೇಧವಾಗಿದೆ, ಸಾರ್ವಜನಿಕ ಸ್ಥಳದ ಮಾಲೀಕರು 60*45 ಸೆ.ಮೀ ಇರುವ ನಾಮಫಲಕವನ್ನು ಅಂಗಡಿಗಳ ಮುಂದೆ ಪ್ರದರ್ಶನ ಮಾಡುವುದು ಹಾಗೂ ಬೆಂಕಿಪಟ್ಟಣ, ಲೈಟರ್ ಮುಂತಾದ ಧೂಮಪಾನಕ್ಕೆ ಉತ್ತೇಜಿಸುವ ವಸ್ತುಗಳನ್ನು ತಂಬಾಕು ಮಾರಾಟ ಮಾಡುವ ಅಂಗಡಿಗಳಲ್ಲಿ ಮತ್ತು ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಇಡುವಂತಿಲ್ಲ.
ಸೆಕ್ಷನ್6 ಬಿ ಪ್ರಕಾರ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ 100 ಅಡಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುವುದು ಅಪರಾಧ. ಸೆಕ್ಷನ್ 7ರ ಪ್ರಕಾರ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಮೇಲೆ ನಿರ್ಧಿಷ್ಠ ಆರೋಗ್ಯ ಎಚ್ಚರಿಕೆಗಳ ಸಂದೇಶಗಳಿಲ್ಲದೆ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ರಮಾಧಿಕಾರಿಗಳು ಹಾಗೂ ಜಿಲ್ಲಾ ಸಮೀಕ್ಷಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here