ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅ. 8 ವರೆಗೆ ಅವಕಾಶ; ಕಲಬುರಗಿ ವಿಭಾಗದ ಪ್ರಾದೇಶಕ ಆಯುಕ್ತರು ಹಾಗೂ ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿಗಳಾದ ಡಾ. ಎನ್.ವಿ. ಪ್ರಸಾದ್ .

0
167

ಕಲಬುರಗಿ,ಅ.05: ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗಿದ್ದು, ದಿನಾಂಕ: 01-11-2019 ಅರ್ಹತಾ ದಿನವಾಗಿ ಪರಿಗಣಿಸಿ, ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅಕ್ಟೋಬರ್ 8ರ ವರೆಗೆ ಅವಕಾಶ ನೀಡಲಾಗಿದೆ. ಅರ್ಹ ಮತದಾರರು ಹೆಸರು ಸೇರಿಸಿಕೊಳ್ಳಬಹುದು ಎಂದು ಕಲಬುರಗಿ ವಿಭಾಗದ ಪ್ರಾದೇಶಕ ಆಯುಕ್ತರು ಹಾಗೂ ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿಗಳಾದ ಡಾ. ಎನ್.ವಿ. ಪ್ರಸಾದ್ ಅವರು ತಿಳಿಸಿದ್ದಾರೆ.

ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ 2020ರ ಅಕ್ಟೋಬರ್ 8 ರೊಳಗಾಗಿ ಅರ್ಹ ಮತದಾರರು ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳ, ತಹಶೀಲ್ದಾರ ಕಚೇರಿಗಳಲ್ಲಿ ದ್ವಿಪ್ರತಿಯಲ್ಲಿ ಅರ್ಜಿ ನಮೂನೆ-19ನ್ನು ಸಲ್ಲಿಸುವ ಮೂಲಕ ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.

ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರದ ಮತದಾರರ ಅಂತಿಮ ಮತದಾರರ ಪಟ್ಟಿಯನ್ನು ಈಗಾಗಲೆ ದಿ.16-01-2020 ರಂದು ಪ್ರಕಟಿಸಲಾಗಿದ್ದು, ಒಟ್ಟು 24,941 ಮತದಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ. ನಿರಂತರ ಹೆಸರು ಸೇರ್ಪಡೆ ಪ್ರಕ್ರಿಯೆ ಭಾಗವಾಗಿ ಮತಪಟ್ಟಿಯಲ್ಲಿ ಈಗಲೂ ಹೆಸರು ಸೇರಿಸಲು ಅವಕಾಶ ನೀಡಲಾಗಿದೆ.

ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಭಾರತದ ಪ್ರಜೆಯಾಗಿರಬೇಕು. ಆಯಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಸಾಮಾನ್ಯ ನಿವಾಸಿಯಾಗಿರುವ ಮತ್ತು 1ನೇ ನವೆಂಬರ್ 2019ಕ್ಕೆ ಮೊದಲು 6 ವರ್ಷಗಳ ಅವಧಿಯಲ್ಲಿ, ಪ್ರೌಢ ಶಾಲೆಗಿಂತ ಕಡಿಮೆಯಿಲ್ಲದ ದರ್ಜೆಯಲ್ಲಿ ನಿರ್ದಿಷ್ಟಪಡಿಸಿದ ರಾಜ್ಯದೊಳಗಿನ ಯಾವುದೇ ಶೈಕ್ಷಣಿಕ ಸಂಸ್ಥೆಗಳಲ್ಲಿ (ಸರ್ಕಾರಿ, ಅನುದಾನಿತ, ಅನುದಾನ ರಹಿತ) ಒಟ್ಟು ಕನಿಷ್ಠ 3 ವರ್ಷ ಬೋಧನಾ ವೃತ್ತಿಯಲ್ಲಿ ನಿರತರಾಗಿರುವ ಪ್ರತಿಯೊಬ್ಬ ವ್ಯಕ್ತಿಯೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅರ್ಹನಾಗಿದ್ದಾನೆ. ಬೋಧನಾ ವೃತ್ತಿ ಕುರಿತು ಸಂಬಂಧಿಸಿದ ಸಂಸ್ಥೆಯಿಂದ ಅನುಬಂಧ-2ರಲ್ಲಿ ಪ್ರಮಾಣಪತ್ರವನ್ನು ಅರ್ಜಿ ಸಲ್ಲಿಸುವ ಮೂಲಕ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here