ವಿದ್ಯಾರ್ಥಿ ವೇತನ, ಅರಿವು ಸಾಲದ ಹಣ ದುರುಪಯೋಗದ ಆರೋಪ – ಸೂಕ್ತ ತನಿಖೆಗೆ ಎಸ್.ಐ.ಓ ಆಗ್ರಹ

0
206

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನವನ್ನು ದುರುಪಯೋಗ ಮಾಡಿರುವ ಆರೋಪ ಕೇಳಿ ಬಂದಿದ್ದು ಸೂಕ್ತ ತನಿಖೆ ನಡೆಸಲು ಎಸ್.ಐ.ಓ ಕರ್ನಾಟಕ ಆಗ್ರಹಿಸಿದೆ.

ಮುಸ್ಲಿಮ್ ಸಮುದಾಯದ ವಿದ್ಯಾರ್ಥಿಗಳಿಗೆ ಮೀಸಲಿಟ್ಟ ಸುಮಾರು 5.2 ಕೋಟಿ ಹಣವನ್ನು ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆ ದುರುಪಯೋಗ ಮಾಡಿ ಬೇರಡೆ ವರ್ಗಾಯಿಸಿರುವ ಬಗ್ಗೆ ಗಂಭೀರ ಆರೋಪವಿದೆ. ಈಗಾಗಲೇ ವಿದ್ಯಾರ್ಥಿಗಳು 2019-20 ರ ಸಾಲಿನ ವಿದ್ಯಾರ್ಥಿ ವೇತನ ವಂಚಿತರಾಗಿದ್ದು ಈಗ ಕೇಳಿ ಬಂದಿರುವ ಆರೋಪವು ವಿದ್ಯಾರ್ಥಿಗಳೊಂದಿಗಿನ ದ್ರೋಹವಾಗಿದೆ. ಕೂಡಲೇ ಈ ಬಗ್ಗೆ ತನಿಖೆ ನಡೆಸಿ ಆರೋಪ ಸಾಬೀತಾದದಲ್ಲಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ.

ಉನ್ನತ ವಿದ್ಯಾಭ್ಯಾಸಗಳಿಗೆ ಸಾಲ ಸೌಲಭ್ಯ ನೀಡುವ ‘ಅರಿವು-2’ ಯೋಜನೆಯ ಸುಮಾರು 50 ಕೋಟಿ ಹಣ ದುರುಪಯೋಗ ಮಾಡಿರುವ ಬಗ್ಗೆ ಆರೋಪವಿದ್ದು, ಈ ಬಗ್ಗೆ ಈಗಾಗಲೇ 2019 ರಲ್ಲಿ ಪ್ರಕರಣ ದಾಖಲಾಗಿದ್ದರೂ ಸೂಕ್ತ ತನಿಖೆಯಾಗಿಲ್ಲ. ಆದ್ದರಿಂದ ‘ಅರಿವು – 2’ ಸಾಲ ಯೋಜನೆಯ ಮೇಲಿನ ಆರೋಪದ ಮೇಲು ರಾಜ್ಯ ಸರಕಾರ ತನಿಖೆ ನಡೆಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕೆಂದು ಎಸ್.ಐ.ಓ ಕರ್ನಾಟಕ ಆಗ್ರಹಿಸಿದೆ.

LEAVE A REPLY

Please enter your comment!
Please enter your name here