ಪರಿಷತ್ ಚುನಾವಣೆ: ಶರಣಪ್ಪ ಮಟ್ಟೂರು ಮತಯಾಚನೆ

0
49

ಶಿಕ್ಷಕರ ಸಮಸ್ಯೆಗೆ ನಿರಂತರ ಸ್ಪಂದಿಸುವ ಕಾಂಗ್ರೆಸ್ ಅಭ್ಯರ್ಥಿ ಮಟ್ಟೂರರಿಗೆ ಮತ ನೀಡಿ ಗೆಲ್ಲಿಸಿ: ಬಸನಗೌಡ ಬಾದರ್ಲಿ
ಸಿಂಧನೂರು.ಅ.೨೪ –
ಶಿಕ್ಷಕರ ಪ್ರತಿಯೊಂದು ಸಮಸ್ಯೆಗೆ ನಿರಂತರವಾಗಿ ಶ್ರಮಿಸುತ್ತಿರುವ ಶರಣಪ್ಪ ಮಟ್ಟೂರು ಅವರಿಗೆ ಪ್ರತಿಯೊಬ್ಬರು ಬೆಂಬಲಿಸುವ ಅನಿವಾರ್ಯತೆ ಇದೆ. ಈ ಬಾರಿಯ ಪರಿಷತ್ ಚುನಾವಣೆಯಲ್ಲಿ ಈಶಾನ್ಯ ವಲಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರನ್ನು ಮತ ನೀಡಬೇಕೆಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಸನಗೌಡ ಬಾದರ್ಲಿ ಮನವಿ ಮಾಡಿದರು.
ಅವರು ನಗರದ ಖಾಸಗಿ ಹೋಟೆಲ್‌ವೊಂದರಲ್ಲಿ ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಈಶಾನ್ಯ ವಲಯ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಾಲಿ ವಿಧಾನ ಪರಿಷತ್ ಸದಸ್ಯ ಶರಣಪ್ಪ ಮಟ್ಟೂರು ಪರವಾಗಿ ಮತಯಾಚನೆ ಮಾಡಿದರು. ಶಿಕ್ಷಕರ ಸಮಸ್ಯೆಗಳ ನಿವಾರಣೆಗೆ ಶರಣಪ್ಪ ಮಟ್ಟೂರು ಪ್ರಾಮಾಣಿಕವಾಗಿ ಸ್ಪಂದಿಸಿದ್ದಾರೆ. ಶಿಕ್ಷಕರಿಗೆ ಸಿಗಬೇಕಾದ ಸೌಲಭ್ಯಗಳ ಕುರಿತಂತೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನ ಮಾಡಿದ್ದಾರೆ ಎಂದರು.
ಅಭ್ಯರ್ಥಿ ಶರಣಪ್ಪ ಮಟ್ಟೂರು ಮಾತನಾಡಿ, ಪ್ರಚಾರ ಕಾರ್ಯದಲ್ಲಿ ಎಲ್ಲಾ ಕಾಂಗ್ರೆಸ್ ಮುಖಂಡರು ಭಾಗವಹಿಸಿ ಅದ್ದೂರಿಯಾಗಿ ನಡೆಸುತ್ತಿದ್ದು ಅಭಿನಂದನೀಯ. ನನ್ನ ಅಧಿಕಾರವಧಿಯಲ್ಲಿ ಈ ಭಾಗದ ಎಲ್ಲಾ ಶಾಲಾ-ಕಾಲೇಜುಗಳಿಗೆ ಖುದ್ದು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿದ್ದೇನೆ. ಕಳೆದ ಭಾರಿ ಚುನಾವಣೆಯಲ್ಲಿ ಹೇಳಿಕೆ ನೀಡಿದಂತೆ ಭ್ರಷ್ಟಾಚಾರ ರಹಿತ, ಪಾರದರ್ಶಕತೆಯ ಆಡಳಿತ ನೀಡಿ, ನೂರಕ್ಕೆ ೭೫ರಷ್ಟು ಕೆಲಸ ಮಾಡಿದ ತೃಪ್ತಿ ನನಗಿದೆ. ಇನ್ನೊಂದು ಸಾರಿ ಅವಕಾಶ ಮಾಡಿಕೊಟ್ಟರೇ ನೂರಕ್ಕೆ ನೂರರಷ್ಟು ಕೆಲಸ ಮಾಡಿ ತೋರಿಸುತ್ತೇನೆ ಎಂದು ಮನವಿ ಮಾಡಿದರು.
ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯಿAದಲೇ ಖಾಸಗಿ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಬೇಕು ಎನ್ನುವ ನಿಟ್ಟಿನಲ್ಲಿ ಪ್ರಯತ್ನ ಮಾಡಿ ಸಂಪುಟ ಉಪ ಸಮಿತಿ ಸಭೆಯಲ್ಲಿ ತೀರ್ಮಾನ ಮಾಡಲು ಪ್ರಯತ್ನಿಸಿದ್ದೇನೆ. ವಿಶೇಷವಾಗಿ ಸರ್ಕಾರಿ, ಅನುದಾನಿತ, ಪದವಿ ಕಾಲೇಜುಗಳ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೆ ನನ್ನ ಅವಧಿಯಲ್ಲಿ ಹೆಚ್ಚಿನ ಪ್ರಾಶಸ್ತö್ಯ ನೀಡಿದ್ದೇನೆ. ಸರ್ಕಾರದ ಮೇಲೆ ಒತ್ತಡ ಹೇರಿ ೭ನೇ ವೇತನ ಆಯೋಗ ಜಾರಿಗೆ ತರಲು ಪ್ರಯತ್ನ ಮಾಡಲಾಗುವುದು ಎಂದ ಅವರು, ಈ ಬಾರಿ ಮತ್ತೆ ತಮಗೆ ಪ್ರಥಮ ಪ್ರಾಶಸ್ತö್ಯದ ಮತ ನೀಡುವ ಮೂಲಕ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ, ರಾಜ್ಯ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ ಹಿರೇಮಠ, ಖಾಸಗಿ ಶಿಕ್ಷಣ ಸಂಸ್ಥೆಯ ವೀರೇಶ ಅಗ್ನಿ, ಮುಖಂಡರಾದ ಬಾಬರ್‌ಪಾಷಾ ವಕೀಲ, ವೆಂಕಟೇಶ ನಾಯಕ, ಶಿಕ್ಷಕ ವೆಂಕನಗೌಡ ವಟಗಲ್ ಸೇರಿದಂತೆ ಶಿಕ್ಷಕರು, ಉಪನ್ಯಾಸಕರು, ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here