ನೀಟ್ ಟಾಪರ್ ಶಾಹೀನ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕಾರ್ತಿಕ್ ರಾಮರೆಡ್ಡಿಗೆ ಸನ್ಮಾನ.

ನೀಟ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದು ಬೀದರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ ಅಲ್ಲದೆ ಮುಂದಿನ ವಿದ್ಯಾರ್ಥಿಗಳು ಇವರ ಮಾದರಿಯಲ್ಲೇ ಜಿಲ್ಲೆಗೆ ಕೀರ್ತಿ ತರಲಿ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ ಪಾಟೀಲ ತೇಗಂಪುರ ತಿಳಿಸಿದರು.

0
260

ಬೀದರ:ಅ.27: ಪ್ರಸಕ್ತ ಸಾಲಿನ ನೀಟ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಟಾಪರ್ ಆಗಿ ಹೊರ ಹೊಮ್ಮಿದ ನಗರದ ಶಾಹೀನ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕಾರ್ತಿಕ್ ರಾಮರೆಡ್ಡಿ ಅವರನ್ನು ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಸೋಮವಾರ ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು.

ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ವಿದ್ಯಾರ್ಥಿಯ ಮನೆಗೆ ತೆರಳಿ ಶಾಲು ಹೊದಿಸಿ ಸನ್ಮಾನಿಸಿದರು.

ನೀಟ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದು ಬೀದರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ ಅಲ್ಲದೆ ಮುಂದಿನ ವಿದ್ಯಾರ್ಥಿಗಳು ಇವರ ಮಾದರಿಯಲ್ಲೇ ಜಿಲ್ಲೆಗೆ ಕೀರ್ತಿ ತರಲಿ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ ಪಾಟೀಲ ತೇಗಂಪುರ ತಿಳಿಸಿದರು.

ಜಿಲ್ಲೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೊರತೆ ಇಲ್ಲ. ಆದರೆ, ಅವರಿಗೆ ಸೂಕ್ತ ಮಾರ್ಗದರ್ಶನದ ಅವಶ್ಯಕತೆ ಇದೆ. ಸಂಘವು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಮೂಲಕ ಜಿಲ್ಲೆಯ ವಿದ್ಯಾರ್ಥಿಗಳಿಗೆ ಸಾಧನೆಗೆ ಪ್ರೇರಣೆ ನೀಡುತ್ತಿದೆ ಎಂದು ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದೇವೇಂದ್ರ ಕರಂಜೆ ಹೇಳಿದರು.

ಸಂಘದ ಜಿಲ್ಲಾ ಘಟಕದ ಪದಾದಿಕಾರಿಗಳಾದ ಸಿದ್ಧಾರಡ್ಡೆ ನಾಗೂರಾ, ಡಾ. ಆನಂದರಾವ, ಹಾವಯ್ಯಾ ಸ್ವಾಮಿ, ಭಗವಂತ ನೌಬಾದಕರ್, ಬಿ. ರಾಮರೆಡ್ಡಿ ಇದ್ದರು.

LEAVE A REPLY

Please enter your comment!
Please enter your name here