ಅರ್ಹತೆ ಹೊಂದಿದ ಎಲ್ಲಾ ರೈತರಿಗೆ ಸಾಲ ಮನ್ನಾ ಸೌಲಭ್ಯ; ಎಸ್ ಟಿ ಸೊಮ್ ಶೇಖರ್.

ಸಾಲ ಮನ್ನಾ ಯೋಜನೆಯಡಿ ಅರ್ಹರಾಗಿ ಮಾಹಿತಿಯನ್ನು ಅಪ್‍ಲೋಡ್ ಮಾಡಿದ್ದ ರೈತರಿಗೂ ಸಾಲ ಮನ್ನಾ ಪ್ರಯೋಜನ ದೊರೆಯುವಂತೆ ಕ್ರಮ

0
190

ಬೆಂಗಳೂರು,ಜ.29- ಸಾಲ ಮನ್ನಾ ಯೋಜನೆಯಡಿ ಅರ್ಹರಾಗಿ ಮಾಹಿತಿಯನ್ನು ಅಪ್‍ಲೋಡ್ ಮಾಡಿದ್ದ ರೈತರಿಗೂ ಸಾಲ ಮನ್ನಾ ಪ್ರಯೋಜನ ದೊರೆಯುವಂತೆ ಕ್ರಮ ಕೈಗೊಳ್ಳಲು ಪರಿಶೀಲನೆ ಮಾಡುವುದಾಗಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ವಿಧಾನಸಭೆಗೆ ಭರವಸೆ ನೀಡಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ದೊಡ್ಡಗೌಡರ ಮಹಂತೇಶ ಬಸವಂತರಾಯ ಅವರ ಪರವಾಗಿ ಹಾಲಪ್ಪ ಆಚಾರ್ ಅವರು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಬೆಂಗಳೂರು ಮಹಾನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆಸುತ್ತಿರುವ ಕಾಮಗಾರಿಗಳ ವಾಸ್ತವ ಸ್ಥಿತಿಗತಿಗಳನ್ನು ಅರಿಯಲು ಸಚಿವರು, ಶಾಸಕರು, ಸಂಸದರು, ಬಿಬಿಎಂಪಿ, ಬಿಡಿಎ, ಬಿಡಬ್ಲ್ಯೂಎಸ್‍ಎಸ್‍ಬಿ ಸೇರಿದಂತೆ ಮತ್ತಿರರ ಅಧಿಕಾರಿಗಳ ಜತೆ ನಗರ ಪ್ರದಕ್ಷಿಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಸಿಎಂ ಮಾತನಾಡಿದರು. ಸ್ಮಾರ್ಟ್ ಸಿಟಿ ಯೋಜನೆಯಡಿ ಒಟ್ಟು 43 ಕಾಮಗಾರಿಗಳನ್ನು 1931ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ.

ಈಗಾಗಲೇ 120ರಿಂದ 130 ಕೋಟಿ ರೂ. ವೆಚ್ಚದಲ್ಲಿ ನಾಲ್ಕೈದು ಕಾಮಗಾರಿಗಳು ಪೂರ್ಣಗೊಂಡಿವೆ. 2022ರ ಮಾರ್ಚ್ ಅಂತ್ಯಕ್ಕೆ ಈ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡು ಸಾರ್ವಜನಿಕ ಸೇವೆಗೆ ಲಭ್ಯವಾಗಬೇಕೆಂದು ತಾಕೀತು ಮಾಡಿದರು. ಕಾಮಗಾರಿಗಳನ್ನು ಖುದ್ದು ನಾನೇ ಪರಿಶೀಲನೆ ನಡೆಸಿದ್ದೇನೆ. ಬಹುತೇಕ ಕಡೆ ಗುಣಮಟ್ಟದ ಕಾಮಗಾರಿಗಳನ್ನೇ ಕೈಗೆತ್ತಿಕೊಳ್ಳಲಾಗಿದೆ.

ಗುಣಮಟ್ಟದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು. ಬೆಂಗಳೂರು ವಿಶ್ವದ ಪ್ರಮುಖ ಮಹಾನಗರಗಳಲ್ಲಿ ಒಂದಾಗಿದೆ. ಇದನ್ನು ವಿಶ್ವದಲ್ಲೇ ಮಾದರಿ ನಗರವನ್ನಾಗಿಸುವುದು ಪ್ರಧಾನಿ ನರೇಂದ್ರ ಮೋದಿ ಅವರ ಯೋಜನೆಯಾಗಿದೆ. ಅವರ ಕನಸನ್ನು ನನಸುಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ಸ್ಪಂದಿಸಿದ ಸಿಎಂ: ಇದಕ್ಕೂ ಮುನ್ನ ವಿಧಾನಸೌಧದಿಂದ ನಗರಪ್ರದಕ್ಷಿಣೆಗೆ ಹೊರಟ ಸಿಎಂ ಮೊದಲು ರೇಸ್‍ಕೋರ್ಸ್ ರಸ್ತೆಯಲ್ಲಿ ಟೆಂಡರ್ ಶ್ಯೂರ್ ಅಡಿ ಕೈಗೆತ್ತಿಕೊಂಡಿರುವ ಫುಟ್‍ಪಾತ್ ವೀಕ್ಷಣೆ ಮಾಡಿದರು. ಆರ್‍ಸಿ ಕಾಲೇಜಿನ ಬಳಿ ಕಾಮಗಾರಿಯನ್ನು ವೀಕ್ಷಿಸುತ್ತಿದ್ದ ವೇಳೆ ವಿದ್ಯಾರ್ಥಿಗಳು ಸಿಎಂ ಅವರಿಗೆ ಇಲ್ಲಿ ಹೆಚ್ಚಿನ ವಾಹನ ದಟ್ಟಣೆ ಇರುವುದರಿಂದ ರಸ್ತೆ ದಾಟಲು ಅನಾನುಕೂಲವಾಗುತ್ತಿದೆ. ಹೀಗಾಗಿ ಇಲ್ಲಿ ಸ್ಕೈವಾಕ್ ನಿರ್ಮಿಸಿಕೊಡಬೇಕೆಂದು ಮನವಿ ಮಾಡಿದರು.

ಇದಕ್ಕೆ ಸ್ಪಂದಿಸಿದ ಯಡಿಯೂರಪ್ಪನವರು, ಚಾಲುಕ್ಯ ವೃತ್ತದಲ್ಲಿ ಸ್ಕೈವಾಕ್ ನಿರ್ಮಾಣ ಮಾಡುವ ಸಂಬಂಧ ಪರಿಶೀಲಿಸಿ ಕ್ರಮ ಕೈಗೊಳ್ಳಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್‍ಗೆ ಸೂಚನೆ ನೀಡಿದರು. ಅಲ್ಲಿಂದ ರಾಜಾರಾಮ್ ಮೋಹನ್‍ರಾಯ್ ರಸ್ತೆ, ರೆಸಿಡೆನ್ಸಿಯಲ್ ರಸ್ತೆ, ಕಸ್ತೂರಬಾ ರಸ್ತೆ, ಬ್ರಿಗೇಡ್ ರಸ್ತೆ, ರಾಜಭವನ್ ರಸ್ತೆಯಲ್ಲಿ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.

ಸಂಚಾರ ದಟ್ಟಣೆ: ಬ್ರಿಗೇಡ್ ರಸ್ತೆಯಲ್ಲಿ ಮುಖ್ಯಮಂತ್ರಿ ಹಾಗೂ ಅವರ ಸಂಪುಟದ ಸಹೋದ್ಯೋಗಿಗಳು ಕೋಶಿಯಾಕ್ ಹೋಟೆಲ್‍ನಲ್ಲಿ ತಿಂಡಿ, ಕಾಫಿ ಸೇವನೆ ಮಾಡಲು ಹೊರಟಿದ್ದರಿಂದ ಭಾರೀ ಸಂಚಾರ ದಟ್ಟಣೆ ನಿರ್ಮಾಣವಾಯಿತು. ಸುಮಾರು 12ರಿಂದ 15 ನಿಮಿಷಗಳ ಕಾಲ ಹೋಟೆಲ್‍ನಲ್ಲೇ ಇದ್ದ ಪರಿಣಾಮ ಸುತ್ತಮುತ್ತಲ ಎಲ್ಲಾ ರಸ್ತೆಗಳನ್ನು ಪೊಲೀಸರು ಬಂದ್ ಮಾಡಿದ್ದರಿಂದ ಸಾರ್ವಜನಿಕರು ಹಿಡಿಶಾಪ ಹಾಕಿದರು.

ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ, ಸಚಿವರಾದ ಬೈರತಿ ಬಸವರಾಜು, ಗೋಪಾಲಯ್ಯ, ಸಂಸದ ಪಿ.ಸಿ.ಮೋಹನ್ ಸೇರಿದಂತೆ ಶಾಸಕರು, ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here