ಬೆಲೆ ಏರಿಕೆ ಖಂಡಿಸಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ವಿನೂತನ ಪ್ರತಿಭಟನೆ

ಅಕ್ಕಿ, ಬೇಳೆಕಾಳು, ಎಣ್ಣೆ, ಹಣ್ಣು, ತರಕಾರಿ ಹೀಗೆ ಎಲ್ಲಾ ಬೆಲೆಗಳು ಏರಿಕೆಯಾಗುತ್ತಲೇ ಇವೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಹೋಟೆಲ್, ತಿಂಡಿ ದರಗಳು ಕೂಡ ಹೆಚ್ಚಾಗಿವೆ. ಎಲ್ಲ ಬೆಲೆ ಏರಿಕೆಯ ಪರಿಣಾಮ ಜನಸಾಮಾನ್ಯರ ಮೇಲೆ ಹೊರೆ ಬೀಳುತ್ತಿದೆ.

0
238

ಬೆಂಗಳೂರು,ಮಾ.2- ಬೆಲೆ ಏರಿಕೆ ಖಂಡಿಸಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ನಗರದ ಮೈಸೂರುಬ್ಯಾಂಕ್ ವೃತ್ತದಲ್ಲಿಂದು ವಿನೂತನವಾಗಿ ಪ್ರತಿಭಟನೆ ನಡೆಸಿದರು. ಖಾಲಿ ಗ್ಯಾಸ್ ಸಿಲಿಂಡರ್ಗಳನ್ನು ಇಟ್ಟುಕೊಂಡು ರಸ್ತೆಯಲ್ಲಿ ಮಲಗಿ ಪ್ರತಿಭಟಿಸುವ ಮೂಲಕ ಬೆಲೆ ಏರಿಕೆಯನ್ನು ಖಂಡಿಸಿದ ವಾಟಾಳ್ ಅವರು, ನಿರಂತರವಾಗಿ ಬೆಲೆ ಏರಿಕೆಯಾಗುತ್ತಿರುವುದರಿಂದ ಬಡ ಹಾಗೂ ಮಧ್ಯಮವರ್ಗದವರ ಬದುಕು ಬರ್ಬಾದ್ ಆಗುತ್ತಿದೆ.

ಸರ್ಕಾರಗಳ ಧೋರಣೆಯಿಂದ ಜನಸಾಮಾನ್ಯರು ಬೀದಿಪಾಲಾಗುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಗ್ಯಾಸ್ ಸಿಲಿಂಡರ್ ಬೆಲೆ 850 ರೂ. ಆಗಿದೆ, ಪೆಟ್ರೋಲ್ ಲೀಟರ್ ಒಂದಕ್ಕೆ 100 ರೂ. ತಲುಪಿದೆ. ಡೀಸೆಲ್ ದರ 85 ರೂ.ಗಳಾಗಿದೆ, ದಿನಸಿ ಪದಾರ್ಥಗಳ ಬೆಲೆ ದಿನೇ ದಿನೇ ಗಗನಮುಖಿಯಾಗುತ್ತಿದೆ. ಆದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ.

ಜನಸಾಮಾನ್ಯರು ಮಾಡುವ ಪ್ರತಿಭಟನೆಗಳು ನರಿಯ ಕೂಗಿನಂತಾಗಿದೆ. ಬೆಲೆ ಏರಿಕೆ ಮೂಲಕ ಸರ್ಕಾರ ಜನಸಾಮಾನ್ಯರನ್ನು ಸುಲಿಗೆ ಮಾಡುತ್ತಿದೆ. ಕೂಡಲೇ ಬೆಲೆ2 ಇಳಿಸದಿದ್ದರೆ ಹೋರಾಟವನ್ನು ತೀವ್ರಗೊಳಿಸುವುದಾಗಿ ಅವರು ಎಚ್ಚರಿಸಿದರು.

ಅಕ್ಕಿ, ಬೇಳೆಕಾಳು, ಎಣ್ಣೆ, ಹಣ್ಣು, ತರಕಾರಿ ಹೀಗೆ ಎಲ್ಲಾ ಬೆಲೆಗಳು ಏರಿಕೆಯಾಗುತ್ತಲೇ ಇವೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಹೋಟೆಲ್, ತಿಂಡಿ ದರಗಳು ಕೂಡ ಹೆಚ್ಚಾಗಿವೆ. ಎಲ್ಲ ಬೆಲೆ ಏರಿಕೆಯ ಪರಿಣಾಮ ಜನಸಾಮಾನ್ಯರ ಮೇಲೆ ಹೊರೆ ಬೀಳುತ್ತಿದೆ.

ಸರ್ಕಾರಗಳು ಕಣ್ಮುಚ್ಚಿ ಕುಳಿತಿವೆ. ಈಗಾಗಲೇ ಕೊರೊನಾದಿಂದ ಸಾಕಷ್ಟು ಸಂಕಷ್ಟಕ್ಕೀಡಾಗಿದ್ದ ಜನ ಬೆಲೆ ಏರಿಕೆಯಿಂದ ಮತ್ತಷ್ಟು ತತ್ತರಿಸಿ ಹೋಗಿದ್ದಾರೆ. ಇದೇ ರೀತಿ ಮುಂದುವರೆದರೆ ಜನಸಾಮಾನ್ಯರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಾರೆ ಎಂದು ಅವರು ಹೇಳಿದರು.

LEAVE A REPLY

Please enter your comment!
Please enter your name here