ರಮೇಶ್ ಜಾರಕಿಹೊಳಿ ನಿರ್ದೋಷಿ; ಪ್ರಸನ್ನಾನಂದ ಸ್ವಾಮೀಜಿ

0
320

ಬೆಂಗಳೂರು (ಮಾರ್ಚ್.4): ಅಶ್ಲೀಲ ವಿಡಿಯೋ ಕಾರಣದಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಮೇಶ್ ಜಾರಕಿಹೊಳಿ ಅವರನ್ನು ಪುನಃ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಿ ಅವರು ನೀರ್ದೋಷಿಗಳು ಎಂದು
ದಾವಣಗೆರೆಯ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿರುವ ಸ್ವಾಮೀಜಿ, ರಮೇಶ್ ಜಾರಕಿಹೊಳಿ ನಿರ್ದೋಷಿಯಾಗಿದ್ರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ.ಹೀಗಾಗಿ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಮುಖ್ಯಮಂತ್ರಿ ಬಿ.ಎಸ್​ಯಡಿಯೂರಪ್ಪ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಈ ಸರ್ಕಾರ ಅಸ್ಥಿತ್ವಕ್ಕೆ ಬರುವಲ್ಲಿ ರಮೇಶ್ ಜಾರಕಿಹೊಳಿ ಪಾತ್ರ ಪ್ರಮುಖವಾದದ್ದು. ಈಗ ರಮೇಶ್ ಜಾರಕಿಹೊಳಿ ತಮ್ಮ ತಪ್ಪಿಲ್ಲದಿದ್ದರೂ ನೈತಿಕ ಹೊಣೆಗಾರಿಕೆಯಿಂದ ರಾಜೀನಾಮೆ ನೀಡಿದ್ದಾರೆ. ಈ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ಅವರ ಜತೆ ಚರ್ಚಿಸಿ, ಸಂಪುಟದಲ್ಲಿ ಉಳಿಸಿಕೊಂಡೇ ತನಿಖೆ ನಡೆಸಬಹುದಿತ್ತು ಎಂದಿದ್ದಾರೆ.

LEAVE A REPLY

Please enter your comment!
Please enter your name here