ಬಿಟ್‌ ಕಾಯಿನ್‌: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಾಜೀನಾಮೆಗೆ ವೆಲ್ಫೇರ್ ಪಾರ್ಟಿ ಆಗ್ರಹ

ಬಿಟ್‌ ಕಾಯಿನ್‌ ಹಗರಣದಲ್ಲಿ ಸರ್ಕಾರ ಏನೋ ಮುಚ್ಚಿಡಲು ಪ್ರಯತ್ನಿಸುತ್ತಿದೆ. ಹೀಗಾಗಿ, ಮುಕ್ತ ಹಾಗೂ ನ್ಯಾಯಸಮ್ಮತ ತನಿಖೆ ನಡೆಸಬೇಕು

0
99

ಬಿಟ್‌ ಕಾಯಿನ್‌: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಾಜೀನಾಮೆಗೆ ವೆಲ್ಫೇರ್ ಪಾರ್ಟಿ ಆಗ್ರಹ

ಬೆಂಗಳೂರು: ಬಿಟ್‌ ಕಾಯಿನ್‌ ಪ್ರಕರಣದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಭಾಗಿಯಾಗಿದ್ದಾರೆ ಎಂಬ ಸಂಶಯವನ್ನು ಮೂಡಿಸಿದೆ ಕೂಡಲೇ ತಮ್ಮ ಸ್ಥಾನ ರಾಜೀನಾಮೆ ನೀಡುವಂತೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರು ತಾಹಿರ್ ಹುಸೇನ್ ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಈ ಪ್ರಕರಣ ಬೆಳಕಿಗೆ ಬಂದಾಗ ಕರ್ನಾಟಕದ ಗೃಹ ಸಚಿವರಾಗಿದ್ದರು ಎಂಬುದು ಗಮನಾರ್ಹ. ಆರೋಪಿಯಿಂದ ವಶಕ್ಕೆ ಪಡೆದಿದ್ದ ₹ 9 ಕೋಟಿ ಮೌಲ್ಯದ 31 ಬಿಟ್ ಕಾಯಿನ್‌ಗಳು ನಾಪತ್ತೆಯಾಗಿವೆ ಎಂದು ಬೆಂಗಳೂರು ಪೊಲೀಸರು 2021ರ ಜನವರಿ 12ರಂದು ಹೇಳಿಕೆ ನೀಡಿದ್ದರು. ಆದರೂ ಸರ್ಕಾರ ಏಕೆ ಸಮಗ್ರ ತನಿಖೆಗೆ ಆದೇಶ ನೀಡಲಿಲ್ಲ.

ಬಿಟ್ ಕಾಯಿನ್ ಪ್ರಕರಣದಲ್ಲಿ ಶ್ರೀಕಿ ಎಂಬುವನು ಪ್ರಮುಖರ ದಾಖಲೆಗಳನ್ನು ಹ್ಯಾಕ್ ಮಾಡಿದ್ದಾನೆ. ಅದು ರಾಷ್ಟ್ರೀಯ, ಅಂತರ ರಾಷ್ಟ್ರೀಯ ಮಟ್ಟದಲ್ಲಿ ಹ್ಯಾಕ್ ಅಗಿದೆ. ಇದರಿಂದ ದೇಶದ ಗೌರವ ಮಣ್ಣುಪಾಲಾಗುತ್ತಿದೆ ಎಂದೂ ತಾಹೀರ್ ಹುಸೇನ್ ಆಕ್ರೋಶ ವ್ಯಕ್ತಪಡಿಸಿದರು.

  1. ಬಿಟ್‌ ಕಾಯಿನ್‌ ಹಗರಣದಲ್ಲಿ ಸರ್ಕಾರ ಏನೋ ಮುಚ್ಚಿಡಲು ಪ್ರಯತ್ನಿಸುತ್ತಿದೆ. ಹೀಗಾಗಿ, ಮುಕ್ತ ಹಾಗೂ ನ್ಯಾಯಸಮ್ಮತ ತನಿಖೆ ನಡೆಸಬೇಕು ಎಂದೂ ಅವರು ಒತ್ತಾಯಿಸಿದರು

LEAVE A REPLY

Please enter your comment!
Please enter your name here