ಈರಲಗಡ್ಡಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ, ಹಳ್ಳಿಯ ಕಡೆ ಕಾರ್ಯಕ್ರಮ

ಜಾಗೃತಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಶಿಶು ಅಭಿವೃದ್ಧಿ ಯೋಜನೆ ಹಾಗೂ ಪೋಷಣ್ ಅಭಿಯಾನದಡಿ, ಅಂಗನವಾಡಿ ಮಕ್ಕಳು ಹಾಗೂ ಗರ್ಭಿಣೀಯರಲ್ಲಿ ಪೌಷ್ಠಿಕತೆ ಹೆಚ್ಚಿಸುವ ನಿಟ್ಟಿನಲ್ಲಿ ಪೌಷ್ಠಿಕ ಆಹಾರ, ಕುರಿತು ಮಾಹಿತಿ ನೀಡಲಾಯಿತು. ಆರೋಗ್ಯ ಇಲಾಖೆಯಿಂದ ಆಭಾ ಕಾರ್ಡ್ ನೊಂದಣಿ ಹಾಗೂ ಆರೋಗ್ಯ ತಪಾಸಣಾ ಶಿಬಿರದ ವ್ಯವಸ್ಥೆ ಮಾಡಲಾಗಿತ್ತು, ವೃದ್ಯಾಪ್ಯ ಮಶಾಸನ, ವಿಧವಾ ಮಶಾಸನ, ಹಾಗೂ ವಿವಿಧ ಇಲಾಖೆಗಳಿಂದ ಫಲಾನುಭವಿಗಳಿಗೆ ಮಶಾಸನ ಪ್ರಮಾಣ ಪತ್ರಗಳನ್ನು ನೀಡಲಾಯಿತು.

0
72

ಈರಲಗಡ್ಡಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ, ಹಳ್ಳಿಯ ಕಡೆ ಕಾರ್ಯಕ್ರ

ಮಾನ್ವಿ: ಜಿಲ್ಲಾಧಿಕಾರಿಗಳ ನಡೆ, ಹಳ್ಳಿಯ ಕಡೆ ಕಾರ್ಯಕ್ರಮ ಯೋಜನೆಯಡಿಯಲ್ಲಿ ಗ್ರಾಮಗಳ ಸಮಸ್ಯೆಗಳನ್ನು ನಿವಾರಣೆ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ ತಿಳಿಸಿದರು.ಮಾನ್ವಿ ತಾಲೂಕಿನ ಈರಲಗಡ್ಡಿ ಗ್ರಾಮದಲ್ಲಿ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದಿಂದ ಶನಿವಾರ ಜಿಲ್ಲಾಧಿಕಾರಿಗಳ ನಡೆ, ಹಳ್ಳಿಯ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.

ಗ್ರಾಮದಲ್ಲಿರುವ ಕಂದಾಯ ಇಲಾಖೆಗೆ ಸಂಬಂಧಪಟ್ಟ ಸಮಸ್ಯೆಗಳನ್ನು ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಂಬಂಧಪಟ್ಟಿಲಾಖೆಯ ತಾಲೂಕು ಅಧಿಕಾರಿಗಳು ಗ್ರಾಮಕ್ಕೆ ಬಂದು ನಿಮ್ಮ ಸಮಸ್ಯೆಗಳನ್ನು ಬಗೆಹರಿಸುತ್ತಾರೆ. ಆದಷ್ಟು ಬಗೆಹರಿಸಲಾಗುವ ಸಮಸ್ಯೆಗಳ ಅರ್ಜಿಗಳನ್ನು ಸ್ಥಳಗಳಲ್ಲಿಯೇ ವಿಲೇವಾರಿ ಮಾಡಲಾಗುವುದು ಬಗೆಹರಿಸಲಾಗದ ಅಜಿಗಳನ್ನು ಜಿಲ್ಲಾ ಮಟ್ಟದ ಅಧಿಕಾರಿಗಳ ಕಚೇರಿಗೆ ಕಳುಹಿಸಿ ೩ ದಿನಗಳೊಳಗಾಗಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಕಂದಾಯ ಇಲಾಖೆಗೆ ಸಂಬಂಧಪಟ್ಟ ಪಹಣಿ ತಿದ್ದುಪಡಿ, ಆಕಾರ್ ಬಂದ್ ತಿದ್ದುಪಡಿ ಹಾಗೂ ಪೌತಿ ಖಾತೆಗೆ ಸಂಬAಧಪಟ್ಟ ಅರ್ಜಿಗಳಿಗೆ ಗ್ರಾಮದಲ್ಲಿಯೇ ಪರಿಹಾರ ನೀಡಲಾಗುವುದು. ಗ್ರಾಮದಲ್ಲಿ ಪಿಂಚಣಿ, ಮಶಾಸನ ಸೌಲಭ್ಯಗಳನ್ನು ನೀಡಲಾಗುವುದು ಗ್ರಾಮಸ್ಥರು ತಮ್ಮ ಅಜಿಗಳನ್ನು ಲಿಖಿತ ರೂಪದಲ್ಲಿ ಸಂಬAಧಪಟ್ಟ ಇಲಾಖೆಗೆ ನೀಡುವ ಮೂಲಕ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ ಎಂದರು.
ಆರೋಗ್ಯ ಇಲಾಖೆಯಿಂದ ಹೆಲ್ತ್ ಕಾರ್ಡ್ಗಾಗಿ ನೋಂದಣಿ ಮಾಡಿಕೊಳ್ಳುವ ವ್ಯವಸ್ಥೆಯನ್ನು ಕಾರ್ಯಕ್ರಮದಲ್ಲಿ ಮಾಡಲಾಗಿದ್ದು, ಜನರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.

ವಿವಿಧ ಇಲಾಖೆಗಳಿಂದ ಜಾಗೃತಿ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಶಿಶು ಅಭಿವೃದ್ಧಿ ಯೋಜನೆ ಹಾಗೂ ಪೋಷಣ್ ಅಭಿಯಾನದಡಿ, ಅಂಗನವಾಡಿ ಮಕ್ಕಳು ಹಾಗೂ ಗರ್ಭಿಣೀಯರಲ್ಲಿ ಪೌಷ್ಠಿಕತೆ ಹೆಚ್ಚಿಸುವ ನಿಟ್ಟಿನಲ್ಲಿ ಪೌಷ್ಠಿಕ ಆಹಾರ, ಕುರಿತು ಮಾಹಿತಿ ನೀಡಲಾಯಿತು. ಆರೋಗ್ಯ ಇಲಾಖೆಯಿಂದ ಆಭಾ ಕಾರ್ಡ್ ನೊಂದಣಿ ಹಾಗೂ ಆರೋಗ್ಯ ತಪಾಸಣಾ ಶಿಬಿರದ ವ್ಯವಸ್ಥೆ ಮಾಡಲಾಗಿತ್ತು, ವೃದ್ಯಾಪ್ಯ ಮಶಾಸನ, ವಿಧವಾ ಮಶಾಸನ, ಹಾಗೂ ವಿವಿಧ ಇಲಾಖೆಗಳಿಂದ ಫಲಾನುಭವಿಗಳಿಗೆ ಮಶಾಸನ ಪ್ರಮಾಣ ಪತ್ರಗಳನ್ನು ನೀಡಲಾಯಿತು.

ಜಾಗೃತಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಶಿಶು ಅಭಿವೃದ್ಧಿ ಯೋಜನೆ ಹಾಗೂ ಪೋಷಣ್ ಅಭಿಯಾನದಡಿ, ಅಂಗನವಾಡಿ ಮಕ್ಕಳು ಹಾಗೂ ಗರ್ಭಿಣೀಯರಲ್ಲಿ ಪೌಷ್ಠಿಕತೆ ಹೆಚ್ಚಿಸುವ ನಿಟ್ಟಿನಲ್ಲಿ ಪೌಷ್ಠಿಕ ಆಹಾರ, ಕುರಿತು ಮಾಹಿತಿ ನೀಡಲಾಯಿತು. ಆರೋಗ್ಯ ಇಲಾಖೆಯಿಂದ ಆಭಾ ಕಾರ್ಡ್ ನೊಂದಣಿ ಹಾಗೂ ಆರೋಗ್ಯ ತಪಾಸಣಾ ಶಿಬಿರದ ವ್ಯವಸ್ಥೆ ಮಾಡಲಾಗಿತ್ತು, ವೃದ್ಯಾಪ್ಯ ಮಶಾಸನ, ವಿಧವಾ ಮಶಾಸನ, ಹಾಗೂ ವಿವಿಧ ಇಲಾಖೆಗಳಿಂದ ಫಲಾನುಭವಿಗಳಿಗೆ ಮಶಾಸನ ಪ್ರಮಾಣ ಪತ್ರಗಳನ್ನು ನೀಡಲಾಯಿತು.

ಈರಲಗಡ್ಡಿ ಗ್ರಾಪಂ ಅಧ್ಯಕ್ಷೆ ಲಚ್ಛಮಮ್ಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರಬಾಬು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೃಷಬೇಂದ್ರಯ್ಯ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ.ಆರ್, ಡಿಡಿಎಲ್‌ಆರ್ ರೇಷ್ಮಾ ಪಾಟೀಲ್, ಜಿಲ್ಲಾ ಅಬಕಾರಿ ಇಲಾಖೆಯ ಅಧಿಕಾರಿ ಲಕ್ಷಿö್ಮ, ಜಿಲ್ಲಾ ಪರಿಶೀಷ್ಟ ಪಂಗಡಗಳ ಕಲ್ಯಾಣ ಅಧಿಕಾರಿ ರಾಜೇಂದ್ರ ಜಲ್ದಾರ್, ಕಾರ್ಮಿಕ ಇಲಾಖೆಯ ಅಧಿಕಾರಿ ಆರತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿರೇಶ ನಾಯಕ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ತರಬೇತಿ ಕೇಂದ್ರದ ಅಧಿಕಾರಿ ಮಹೆಬೂಬ್ ಜಿಲಾನಿ, ಮಾನ್ವಿ ತಹಶೀಲ್ದಾರ(ಗ್ರೇಡ್-೧) ಚಂದ್ರಕಾಂತ.ಎಲ್.ಡಿ, ಮಾನ್ವಿ ತಹಶೀಲ್ದಾರ್(ಗ್ರೇಡ್-೨) ಅಬ್ದುಲ್ ವಾಹೀದ್, ಮಾನ್ವಿ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಅಣ್ಣರಾವ್ ಸೇರಿದಂತೆ ಗ್ರಾಮದ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here